ಜಮೀನೊಂದರಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಲಘು ವಿಮಾನ ಪತನವಾಗಿರುವ ಘಟನೆ ಜರುಗಿದೆ.
ಚಾಮರಾಜನಗರ : ಜಿಲ್ಲೆಯ ಬೋಗಪುರ ಸಮೀಪದ ಜಮೀನೊಂದರಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಲಘು ವಿಮಾನ ಪತನವಾಗಿರುವ ಘಟನೆ ಗುರುವಾರ ಜರುಗಿದೆ.
ವಿಮಾನದಲ್ಲಿದ್ದ ಇಬ್ಬರು ಪೈಲೆಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಹಾರಾಟದ ವೇಳೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಕೂಡಲೇ ಎಚ್ಚೆತ್ತ ಪೈಲೆಟ್ ಗಳು ಪ್ಯಾರಾಚೂಟ್ ಮೂಲಕ ವಿಮಾನದಿಂದ ಪ್ರಾಣ ಉಳಿಸಿಕೊಂಡಿದ್ದಾರೆ ಘಟನೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ವಾಯು ಸೇನೆಯ ಕಿರಣ್ ಏರ್ ಪಥ ಹೆಸರಿನ u692 ಸಂಖ್ಯೆಯ ತರಬೇತಿ ವಿಮಾನ ಧರೆಗಪ್ಪಳಿಸಿದೆ. ಪೈಲೆಟ್ ಗಳಾದ ಭೂಮಿಕ ಹಾಗೂ ತೇಜ್ ಪಾಲ್ ಎಂಬುವರು ವಿಮಾನ ಚಲಾಯಿಸುತ್ತಿದ್ದರು. ನಿಯಂತ್ರಣ ಕಳೆದುಕೊಳ್ಳುತ್ತಿದ್ದಂತೆ ಪ್ಯಾರಾಚೂಟ್ ಮೂಲಕ ಇಬ್ಬರು ಹಾರಿ ವಿಮಾನ ಪಥನಗೊಂಡ 2 km ದೂರದಲ್ಲಿ ಬಿದ್ದಿದ್ದಾರೆ. ವಾಯು ಸೇನೆ ಪಡೆ ಇಬ್ಬರನ್ನು ಪತ್ತೆ ಹಚ್ಚಿ ರಕ್ಷಣೆ ಮಾಡಿದೆ ಇಬ್ಬರಿಗೂ ಕುತ್ತಿಗೆ ಬಳಿ ಸಣ್ಣಪುಟ್ಟ ಗಾಯವಾಗಿದ್ದು ಬೆಂಗಳೂರಿಗೆ ವಿಶೇಷ ಹೆಲಿಕ್ಯಾಪ್ಟರ್ ನಲ್ಲಿ ಚಿಕಿತ್ಸೆಗೆ ಕರೆದೊಯ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ಪಧನವಾದ ವಿಮಾನವನ್ನು ನೋಡಲು ಅಕ್ಕಪಕ್ಕದ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.
ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.



