ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ.
ಸಮರೋಪಾಧಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ
ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ
ಬೆಂಗಳೂರು, ಜೂನ್ 9: ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕು ಎನ್ನುವ ಸೂಚನೆಯನ್ನೂ ನೀಡಿದ್ದಾರೆ.
ಈ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಕಲುಷಿತ ನೀರು: ಮಾಹಿತಿ ಕೇಳಿದ ಸಿಎಂ
ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿ ಆಗಿರುವ ಹಿನ್ನೆಲೆಯಲ್ಲಿ ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.


