ವಿಮಾನ ಪತನಗೊಂಡು 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಜೀವಂತವಾಗಿ ಸಿಕ್ಕ 4 ಮಕ್ಕಳು.

ವಿಮಾನ ಪತನಗೊಂಡು 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಜೀವಂತವಾಗಿ ಸಿಕ್ಕ 4 ಮಕ್ಕಳು.

ಬೊಗೋಟಾ: ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ದಟ್ಟ ಅರಣ್ಯದಿಂದ ಮಗು ಸೇರಿದಂತೆ 4 ಮಕ್ಕಳನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಕೊಲಂಬಿಯಾದ ಸೇನಾಪಡೆ ತಿಳಿಸಿದೆ.
ಮೇ 1 ರಂದು 7 ಪ್ರಯಾಣಿಕರು ಹಾಗೂ ಒಬ್ಬ ಪೈಲಟ್ ಇದ್ದ ಸೆಸ್ನಾ ಸಿಂಗಲ್ ಎಂಜಿನ್‌ನ ಸಣ್ಣ ವಿಮಾನವೊಂದು ಎಂಜಿನ್ ವೈಫಲ್ಯದಿಂದಾಗಿ ಪತನವಾಗಿತ್ತು. ಘಟನೆಯ ಬಳಿಕ ಬದುಕುಳಿದವರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಅಪಘಾತವಾಗಿ 2 ವಾರಗಳ ಬಳಿಕ ಅಮೆಜಾನ್ ದಟ್ಟ ಕಾಡಿನಲ್ಲಿ ಪತನವಾಗಿದ್ದ ವಿಮಾನವನ್ನು ಕಂಡುಹಿಡಿಯಲಾಗಿದ್ದು, ಮೂವರು ವಯಸ್ಕರ ಮೃತದೇಹಗಳು ಪತ್ತೆಯಾಗಿತ್ತು. ಆದರೆ ಅವರೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 4 ಮಕ್ಕಳು ಮಾತ್ರ ಪತ್ತೆಯಾಗಿರಲಿಲ್ಲ.
11 ತಿಂಗಳ ಮಗು ಸೇರಿದಂತೆ 13, 9, 4 ವರ್ಷದ ಮಕ್ಕಳು ನಾಪತ್ತೆಯಾಗಿದ್ದರು. ಮಕ್ಕಳೆಲ್ಲರೂ ಒಂದೇ ಕುಟುಂಬದವರಾಗಿದ್ದರು. ಕಾರ್ಯಾಚರಣೆ ವೇಳೆ ಕಾಡಿನಲ್ಲಿ ಮಕ್ಕಳ ಹೆಚ್ಚೆ ಗುರುತು, ಅರ್ಧ ತಿಂದ ಹಣ್ಣುಗಳು ಸೇರಿದಂತೆ ಹಲವು ಕುರುಹುಗಳು ಪತ್ತೆಯಾಗಿತ್ತು. ಹೀಗಾಗಿ ಮಕ್ಕಳು ಬದುಕಿರುವ ನಿರೀಕ್ಷೆಯಲ್ಲಿ ಹುಡುಕಾಟವನ್ನು ತೀವ್ರಗೊಳಿಸಲಾಯಿತು.
ಮಕ್ಕಳನ್ನು ಪತ್ತೆಹಚ್ಚಲು ಕಾಡಿನಲ್ಲಿ ನಾಯಿಗಳು, 150 ಸೈನಿಕರು ಹುಡುಕಾಟ ನಡೆಸಿದರು. ಸ್ಥಳೀಯ ಬುಡಕಟ್ಟಿನ ಹತ್ತಾರು ಸ್ವಯಂಸೇವಕರೂ ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದರು. ಬದುಕುಳಿದಿರೋ ಮಕ್ಕಳು ಮುಂದೆ ಸಾಗದಂತೆ ತಡೆಯಲು ಕಾಡಿನಾದ್ಯಂತ ಧ್ವನಿ ಸುರುಳಿಗಳನ್ನು ಪ್ರಸಾರ ಮಾಡಲಾಗಿತ್ತು. ಹಸಿವಿನಿಂದ ಅವರು ಸಾಯಬಾರದು ಎಂಬ ಕಾರಣಕ್ಕೆ ಆಹಾರ, ನೀರಿನ ಬಾಟಲಿಗಳನ್ನು ಹೆಲಿಕಾಪ್ಟರ್ ಮೂಲಕ ಮೇಲಿನಿಂದ ಕಾಡಿನೊಳಗಡೆ ಎಸೆಯಲಾಗಿತ್ತು.
40 ದಿನಗಳ ಬಳಿಕ ಕೊನೆಗೂ ನಾಪತ್ತೆಯಾಗಿದ್ದ ಮಕ್ಕಳು ಜೀವಂತವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೋ ಪೆಟ್ರೋ, ಇದೊಂದು ವಿಸ್ಮಯಕಾರಿ ಘಟನೆಯಾಗಿದೆ. ಹುಡುಕಾಟದ 40 ದಿನಗಳ ಬಳಿಕ ಸೇನಾಪಡೆ ಹಾಗೂ ಸ್ಥಳೀಯ ಜನರು ಮಕ್ಕಳನ್ನು ಪತ್ತೆ ಮಾಡಿದ್ದಾರೆ. ಕಷ್ಟದ ಪರಿಸ್ಥಿತಿಯಲ್ಲಿಯೂ ಮಕ್ಕಳು ದೈರ್ಯದಿಂದ ಬದುಕುಳಿಯುವ ಮಾರ್ಗಗಳನ್ನು ಕಂಡುಹಿಡಿದಿರುವುದನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುತ್ತದೆ ಎಂದಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *