ವಿದ್ಯುತ್ ಶಾಕ್ ನಿಂದ ನಾಲ್ವರು ಆಸ್ಪತ್ರೆಗೆ ದಾಖಲು.
ತುಮಕೂರು:ಕೊರಟಗೆರೆ ತಾಲೂಕಿನ ಚಿಲುಗನಹಳ್ಳಿ ಗ್ರಾಮದಲ್ಲಿ ವಿದ್ಯುತ್ ದುರಂತ..
ಗ್ರಾಮದಲ್ಲಿನ 11 ಕೆವಿ ವಿದ್ಯುತ್ ಸಾಮರ್ಥ್ಯದ ತಂತಿ ತುಂಡಾದ ಪರಿಣಾಮ ಅವಘಡ..
ಗ್ರಾಮದ 70 ಮನೆಗಳಲ್ಲಿನ ವಿದ್ಯುತ್ ಉಪಕರಣಗಳು ಭಸ್ಮ..
ನೂರಾರು ಮನೆಗಳ ವೈರಿಂಗ್ ಸೇರಿದಂತೆ ಗೃಹಪಯೋಗಿ ವಸ್ತುಗಳು, ವಿದ್ಯುತ್ ಮೀಟರ್ ಗಳು ಸುಟ್ಟು ಭಸ್ಮ..
ಲಕ್ಷಾಂತರ ರೂ. ಬೆಲೆಯ ಗೃಹಪಯೋಗಿ ವಸ್ತುಗಳು ಸುಟ್ಟು ಕರಕಲು ಮನೆಯ ಒಳಗೆ ಇರಲು ಆತಂಕ..
ತಾಯಿ ಶಾರದಮ್ಮ (55) ಮಗ ಮಂಜುನಾಥ್ (35) ಸೊಸೆ ವರಲಕ್ಷ್ಮಿ (30) ಮೊಮ್ಮಗ ದರ್ಶನ್ (12 )ವಿದ್ಯುತ್ ಶಾಕ್ ಗೆ ತುತ್ತಾದವರು.
ಪ್ರಾಣಾಪಾಯದಿಂದ ಪಾರಾದ ನಾಲ್ವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ.ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ, ಕೊರಟಗೆರೆ ತಹಶೀಲ್ದಾರ್, ಬೆಸ್ಕಾಂ ಅಧಿಕಾರಿಗಳು ಭೇಟಿ ಪರಿಶೀಲನೆ ವಿದ್ಯುತ್ ತಂತಿ ದುರಸ್ತಿಗೆ ಕ್ರಮ.ಸುಟ್ಟು ಕರಕಲಾದ ಗೃಹಪಯೋಗಿ ವಸ್ತುಗಳಿಗೆ ಶೀಘ್ರ ಪರಿಹಾರ ನೀಡೋದಾಗಿ ಬೆಸ್ಕಾಂ ಅಧಿಕಾರಿಗಳ ಭರವಸೆ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ನಾಲ್ವರ ಆರೋಗ್ಯ ವಿಚಾರಿಸಿದ ತಹಶೀಲ್ದಾರ್ ಮುನಿಶಾಮಿ ರೆಡ್ಡಿ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.


