ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮಂಡಿಸಿದ್ದಾರೆ.

ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮಂಡಿಸಿದ್ದಾರೆ.

ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮಂಡಿಸಿದ್ದಾರೆ.

ಎರಡು ದಶಕಗಳಿಂದಲೂ
ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ,ದಸರಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕೆಂಬ ಕೂಗು ಕೇಳಿ ಬರುತ್ತಲೇ ಇತ್ತು. ಆದರೆ, ಅದು ಇನ್ನೂ ಅನುಷ್ಠಾನಗೊಂಡಿಲ್ಲ.ಸಿಎಂ ಸಿದ್ದರಾಮಯ್ಯ ತಮ್ಮ 14 ನೇ ಬಜೆಟ್ ಮಂಡನೆ ಮಾಡಿ ತವರು ಜಿಲ್ಲೆಗೆ ಈ ಬಾರಿ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಅಸ್ತು ಎಂದಿದ್ದಾರೆ.

ಕಮರ್ಶಿಯಲ್ ಚಟುವಟಿಕೆಯಿಂದ ಬೆಟ್ಟ ದಿನೇದಿನೇ ತನ್ನ ಸತ್ವ ಕಳೆದುಕೊಳ್ಳುತ್ತಿತ್ತು. ಇದೀಗ ಬೆಟ್ಟ ಉಳಿಸಲು ಪ್ರಾಧಿಕಾರ ಸಹಕಾರಿಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಪಾರಂಪರಿಕ ಕಟ್ಟಡಗಳಿಗಿಲ್ಲ ಅನುದಾನ
ಮೈಸೂರು ಸಾಂಸ್ಕೃತಿಕ ನಗರಿ ಹೇಗೋ ಪಾರಂಪರಿಕ ನಗರಿ ಕೂಡ ಹೌದು. ಮೈಸೂರು ನಗರದಲ್ಲಿ ಸರ್ಕಾರ ಅಧಿಕೃತವಾಗಿ ಘೋಷಿಸಿರುವ 132 ಪಾರಂಪರಿಕ ಕಟ್ಟಡಗಳಿಗೆ. ಆದರೆ, ಅದರ ನಿರ್ವಹಣೆ ಇಲ್ಲಘಿ. ಇದರಿಂದ ಎಷ್ಟೋ ಕಟ್ಟಡಗಳು ಕುಸಿದು ಬೀಳುತ್ತಿದೆ. ಕಳೆದ ಬಾರಿ ವಿಶೇಷ ಅನುದಾನ ಸಿಗುವ ನಿರೀಕ್ಷೆ ಇತ್ತು. ಆದರೆ, ಈ ಬಾರಿಯೂ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಯಾವುದೇ ಅನುದಾನ ಘೋಷಣೆ ಆಗದೆ ಇರುವುದು ನಿರಾಸೆ ಮೂಡಿಸಿದೆ

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *