ನೋಡಲ್ ಅಧಿಕಾರಿಗಳ ಸಭೆ
ಬೆಂಗಳೂರಿನ ವಿಕಾಸಸೌಧದಲ್ಲಿ ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರ ನೇತೃತ್ವದಲ್ಲಿ ಇಲಾಖೆಯ ಅಡಿಯಲ್ಲಿ ಬರುವ SCP/ TSP ಅನುದಾನದ ಹಂಚಿಕೆಯ ಕುರಿತಂತೆ ಜರುಗಿದ ನೋಡಲ್ ಅಧಿಕಾರಿಗಳ ಸಭೆಯು ಜರುಗಿತು.
ಈ ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ರೂಪಿಸಲಾದ SCP/TSP ಕಾಯ್ದೆಯ ಉದ್ದೇಶಕ್ಕೆ ಅನುಗುಣವಾಗಿ ಎಲ್ಲಾ ಇಲಾಖೆಗಳಲ್ಲಿ ಯಾವ ರೀತಿ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರಗತಿಯ ಸ್ಥಿತಿಗತಿ ಏನಾಗಿದೆ ಮತ್ತು ಪ್ರಗತಿಯ ಹಾದಿಯಲ್ಲಿ ಇಲಾಖೆಗಳು ಏನಾದರೂ ಕೊರತೆಗಳನ್ನು ಎದುರಿಸುತ್ತಿವೆಯೇ? ಎಂಬ ವಿಷಯಗಳ ಕುರಿತು ಮಾನ್ಯ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿದರು
ಸಭೆಯ ಆರಂಭದಲ್ಲೇ 7ಡಿ ಅನ್ನು ರದ್ದುಪಡಿಸಿರುವ ಸಂಗತಿಯನ್ನು ಎಲ್ಲಾ ಅಧಿಕಾರಿಗಳೂ ಗಮನದಲ್ಲಿ ಇಟ್ಟುಕೊಳ್ಳಬೇಕು, ಎಂದು ತಿಳಿಸಿದ ಸಚಿವರು ಇಲಾಖಾವಾರು ಉಪಸ್ಥಿತರಿದ್ದ ಅಧಿಕಾರಿಗಳಿಗೆ SCP/ TSP ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸದೇ ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದ ಏಳಿಗೆಗೆ ಮಾತ್ರ ಬಳಸಬೇಕು ಎಂದು ತಿಳಿಸಿದರು.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116
Website :www.shivamotors.net


