ಹೊಳೆಬಾಗಿಲು ದಿಂದ ಸಾಗರಕ್ಕೆ ಚಲಿಸುತ್ತಿದ್ದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ
ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು – ಇಬ್ಬರು ಶಿವಮೊಗ್ಗ ಜಿಲ್ಲಾಸ್ಪತ್ರೆಗೆ 108 ವಾಹನ ಮೂಲಕ ರವಾನೆ
ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ಹೊಳೆಬಾಗಿಲು ದಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿರ್ಲಕ್ಷತನ ಹಾಗೂ ಅತೀ ವೇಗದಿಂದ ಗೆಣಸಿಕುಣಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದೂ, ಒಟ್ಟು 45 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು, ಅದರಲ್ಲಿ ಹೆಚ್ಚಿನ ಪ್ರಯಾಣಿಕರು ಕಾಲೇಜು ಶಾಲಾ ವಿದ್ಯಾರ್ಥಿಗಳು ಎಂದೂ ಮಾಹಿತಿ ಲಭ್ಯವಾಗಿದೆ
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಬಸ್ ಗೆ ತಾಗಿದ್ದೂ ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಆಗಿದ್ದೂ, ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೂ, ಇರ್ವರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಯಾದ ಮೆಗ್ಗಾನ್ ಆಸ್ಪತ್ರೆಗೆ 108 ತುರ್ತು ವಾಹನದಲ್ಲಿ ರವಾನೆ ಮಾಡಲಾಗಿರುವ ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ವರದಿ : ಓಂಕಾರ್.ವಿ. ತಾಳಗುಪ್ಪ.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116



