ಸಾಗರ ಪ್ರಗತಿ ಪ್ರೌಢಶಾಲೆ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಸಾಗರ ಪ್ರಗತಿ ಪ್ರೌಢಶಾಲೆ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಸಾಗರ :ಇಲ್ಲಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ. ಈಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಗತಿ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದಿದ್ದು ತಂಡದ ಸದಸ್ಯರಾದ ನಿಖಿಲ್ ವಿ.ಜೀವನ ಶೇಟ್, ಮೊಹಮ್ಮದ್ ಅಮ್ರಾನ್, ಜಮ್ಮು-ಕಾಶ್ಮೀರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಉತ್ತಮ ಸಾಧನೆ ತೋರಿರುವ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಕ ದೇವರಾಜ್ ಎಸ್.ಎಂ. ಅವರಿಗೆ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪದಾಧಿಕಾರಿಗಳು ಅಭಿನಂದನೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *