ಪಡಿತರ ಚೀಟಿ ನೋಂದಣಿ ಸರಳಗೊಳಿಸಿ : ವಿಕ್ರಮ ಅಯ್ಯಂಗಾರ್

ಪಡಿತರ ಚೀಟಿ ನೋಂದಣಿ ಸರಳಗೊಳಿಸಿ : ವಿಕ್ರಮ ಅಯ್ಯಂಗಾರ್

ಮೈಸೂರು: ಸರ್ಕಾರ ಬಡವರಿಗಾಗಿ ಪಡಿತರ ಚೀಟಿ ಮೂಲಕ ಸಾರ್ವಜನಿಕ ಆಹಾರ ವಿತರಣಾ ವ್ಯವಸ್ಥೆ ಜಾರಿಗೆ ತಂದಿದೆ. ಸರ್ಕಾರ ಹೊಸ ಪಡಿತರ ಚೀಟಿ ನೋಂದಣಿ ಪ್ರಕ್ರಿಯೆ ಸರಳೀಕರಣಗೊಳಿಸಬೇಕು ಎಂದು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಒತ್ತಾಯ ಮಾಡಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಹೊಸ ಪಡಿತರ ಕಾರ್ಡ್‌ ನೋಂದಣಿದಾರರಿಗೆ ಸಮಸ್ಯೆಯಾಗುತ್ತಿದ್ದು, ತಿಂಗಳಿಗೆ 3 ದಿನಗಳ ಮಾತ್ರ ನೋಂದಣಿಗೆ ಸಮಯ ನೀಡಲಾಗುತ್ತಿದೆ. ಈ ಮೂರು ದಿನದಲ್ಲಿ ಕೇವಲ 1 ದಿನ ಮಾತ್ರ ಸರ್ವರ್ ಕೆಲಸ ಮಾಡುತ್ತಿದೆ. ಇದರಿಂದ ಫಲಾನುಭವಿಗಳಿಗೆ ಸರಿಯಾದ ಲಾಭ ಸಿಗುತ್ತಿಲ್ಲ. ಕೂಡಲೇ ಸರ್ಕಾರ ಹೊಸ ಅರ್ಜಿಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಬಡ ಕೂಲಿ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಹಾಗೂ ಚಿಕಿತ್ಸೆ ಪಡೆಯುವ ಬಡವರಿಗೆ ತೊಂದರೆ ಆಗುತ್ತಿದೆ. ಯಾವುದೇ ಸೌಲಭ್ಯ ಪಡೆಯಬೇಕಾದರೆ ಪಡಿತರ ಚೀಟಿ ಅವಶ್ಯಕತೆ ಉಂಟಾಗುತ್ತಿದ್ದು, ಪಡಿತರ ಚೀಟಿ ನೋಂದಣಿ ಪ್ರಕ್ರಿಯೆಯಲ್ಲಿ ಗೊಂದಲಮಯವಾಗಿದೆ. ಎಲ್ಲ ತೊಂದರೆಗಳನ್ನು ಸರಿಪಡಿಸಿ ರಾಜ್ಯ ಸರ್ಕಾರ ಹೊಸ ಪಡಿತರ ಚೀಟಿ ನೋಂದಣಿ ಪ್ರಕ್ರಿಯೆ ಸರಳೀಕರಣಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ವರದಿ :ನಂದಿನಿ ಮೈಸೂರು

https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

Leave a Reply

Your email address will not be published. Required fields are marked *