ಪ್ರತಾಪ್ ಸಿಂಹ ಅವರಿಗೆ ಅವಕಾಶ ತಪ್ಪಿಸಿರುವುದು ಹಿಂದುತ್ವಕ್ಕೆ ಮಾಡಿದ ಮೋಸ-ಪ್ರಮೋದ್ ಮುತಾಲಿಕ್ ಆಕ್ರೋಶ
ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲ ಸಂಸದ ಎನಿಸಿಕೊಂಡು ಹಿಂದುತ್ವದ ಪ್ರತಿಪಾದಕರಾಗಿದ್ದ ಯುವ ನೇತಾರ ಪ್ರತಾಪ್ ಸಿಂಹ ಅವರಿಗೆ ಕೊಡಗು ಮೈಸೂರು ಕ್ಷೇತ್ರದಲ್ಲಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದೇ ಇರುವುದು ಅತ್ಯಂತ ದೊಡ್ಡ ನಷ್ಟ ಎಂದು ಸಂಘಟನೆಯ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಯೋಜನೆಗಳ ಮೂಲಕ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿದ್ದ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿದ್ದ ಪ್ರತಾಪ್ ಸಿಂಹ ಹಿಂದುತ್ವವನ್ನು ಅತ್ಯುಗ್ರವಾಗಿ ಪ್ರತಿಪಾದಿಸಿದ್ದೇ ಅವರಿಗೆ ಮುಳುವಾಯಿತೆ.

ಹೀಗಾದರೆ ಕರ್ನಾಟಕದಲ್ಲಿ ಹಿಂದುತ್ವ ಉಳಿಯುವುದು ಹೇಗೆ ಎಂದು ಪ್ರಮೋದ್ ಮುತಾಲಿಕ್ ಹೇಳಿಕೆಯಲ್ಲಿ ತನ್ನ ಸಿಟ್ಟನ್ನು ವ್ಯಕ್ತಪಡಿಸಿದ್ದಾರೆ. ಇಂತಹ ತಪ್ಪು ನಿರ್ಧಾರಗಳಿಂದಾಗಿಯೇ ಬಿಜೆಪಿ ಜನರ ಸಿಟ್ಟಿಗೆ ಅಸಮಾಧಾನಕ್ಕೆ ಕಾರಣ ಆಗುತ್ತಿದೆ ಎಂದು ಪ್ರಮೋದ್ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

