ದಲಿತರು ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಲ್ಲಿ ಭಯ ಮೂಡಿಸುವುದೇ ಬಿಜೆಪಿಗರ CAA ಕಾಯ್ದೆಯ ಗುರಿ – ಡಾ ಹೆಚ್ ಸಿ ಮಹದೇವಪ್ಪ

ದಲಿತರು ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಲ್ಲಿ ಭಯ ಮೂಡಿಸುವುದೇ ಬಿಜೆಪಿಗರ CAA ಕಾಯ್ದೆಯ ಗುರಿ – ಡಾ ಹೆಚ್ ಸಿ ಮಹದೇವಪ್ಪ

CAA ಮತ್ತು NRC ಗೆ ಸಂಬಂಧಿಸಿದಂತೆ ಈ ಹಿಂದೆ ಜನರಿಂದ ಸಾಕಷ್ಟು ವಿರೋಧ ಎದುರಿಸಿದ್ದ ಕೇಂದ್ರ ಸರ್ಕಾರವು ತನ್ನ ಗೃಹ ಸಚಿವ ಅಮಿತ್ ಷಾ ಅವರ ಮೂಲಕ ಅಂತಹ ಯಾವುದೇ ಪ್ರಸ್ತಾಪವು ಸರ್ಕಾರದ ಮುಂದೆ ಇಲ್ಲವೆಂದು ಹೇಳಿತ್ತು. ಆದರೆ ಇದೀಗ ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಮತ್ತೊಮ್ಮೆ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಗೊಂದಲ ಎಬ್ಬಿಸಿ ಅವರಲ್ಲಿ ಭೀತಿ ಮೂಡಿಸಲು ಪ್ರಯತ್ನಿಸುತ್ತಿದೆ. ಈಗಾಗಲೇ ಹಲವು ಬಾರಿ ಹೇಳಲಾದಂತೆ ಪ್ರಜಾಪ್ರಭುತ್ವ ದೇಶವಾದ ಭಾರತವು ಸಾಮರಸ್ಯದ ತತ್ವವನ್ನು ಅಳವಡಿಸಿಕೊಂಡ ನೆಲವಾಗಿದೆ. ಬುದ್ಧನ ಕಾಲದಲ್ಲೇ ಈ ದೇಶವು ಪೌರತ್ವ ಮತ್ತು ಪ್ರಜಾಪ್ರಭುತ್ವವನ್ನು ಅನುಭವಿಸಿದ್ದು ನಮಗೆ ಪೌರತ್ವ ಕೊಡಿ ಎಂದು ಕೇಳುವಂತಹ ದುರ್ಗತಿ ಬರುವುದಕ್ಕೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿಲ್ಲ. ಮೂಲತಃ ಶೋಷಿತ ವರ್ಗಗಳ ವಿರೋಧಿಗಳಾಗಿರುವ ಮನುವಾದಿ ಬಿಜೆಪಿಗರು ಕ್ರಮೇಣ ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಪಡಿಸಿ ಅವರಲ್ಲಿ ಭೀತಿ ಹುಟ್ಟಿಸಿ ನಂತರ ಅದನ್ನು ದಲಿತರು, ಆದಿವಾಸಿಗಳು ಮತ್ತು ಹಿಂದುಗಳಿದ ವರ್ಗಗಳ ಮೇಲೂ ಆ ಭೀತಿಯನ್ನು ಹೇರುತ್ತಾರೆ.

ಹೀಗಾಗಿ ಯಾರಿಗೋ ತೊಂದರೆ ಅಥವಾ ಭೀತಿ ಉಂಟಾದರೆ ನಮಗೇನು ಎಂದು ನಾವು ಈ ದಿನ ಸುಮ್ಮನೇ ಕುಳಿತರೆ ಮುಂದೆ ನಮಗೆ ತೊಂದರೆ ಆದಾಗ ನಮ್ಮ ಪರವಾಗಿ ಹೋರಾಟ ನಡೆಸಲು ಯಾರೂ ಇರುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಂಡು, ದೇಶದ ಒಳಗೆ ಒಡಕು ಮೂಡಿಸುವ ಉದ್ದೇಶದೊಂದಿಗೆ ಜಾರಿಗೊಂಡಿರುವ CAA ಕಾಯ್ದೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಆಡಳಿತಾತ್ಮಕ ವೈಫಲ್ಯ ಮತ್ತು ಚುನಾವಣಾ ಬಾಂಡ್ ಗಳ ಚರ್ಚೆಯ ದಿಕ್ಕು ತಪ್ಪಿಸಲು ಮನಸ್ಸಿಗೆ ಬಂದಂತೆ ನಿರ್ಧಾರ ಕೈಗೊಳ್ಳುತ್ತಿರುವ ಬಿಜೆಪಿಗರ ಸರ್ವಾಧಿಕಾರಕ್ಕೆ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳು ತಕ್ಕ ಪಾಠ ಕಲಿಸಬೇಕು.

ವರದಿ :ನಂದಿನಿ ಮೈಸೂರು

https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

Leave a Reply

Your email address will not be published. Required fields are marked *