ಗುಬ್ಬಚ್ಚಿ ದಿನಾಚರಣೆಯ ಅಂಗವಾಗಿ ಗುಬ್ಬಚ್ಚಿ ಹಬ್ಬ

ಗುಬ್ಬಚ್ಚಿ ದಿನಾಚರಣೆಯ ಅಂಗವಾಗಿ ಗುಬ್ಬಚ್ಚಿ ಹಬ್ಬ

ಅಳಿವಿನಂಚಿನಲ್ಲಿರುವ ಗುಬ್ಬಿ ಸಂತತಿಯನ್ನು ಮುಂದಿನ ಪೀಳಿಗೆಗೂ ಉಳಿಸಿ ಪಕ್ಷಿ ತಜ್ಞ ಸಪ್ತ ಗಿರೀಶ್ ಎಂ ಕೆ

ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿದೆ. ಆದ್ದರಿಂದ ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ ಪಕ್ಷಿ ತಜ್ಞರು ಹಾಗೂ ಪರಿಸರವಾದಿ ಸಪ್ತ ಗಿರೀಶ್ ಎಂ ಕೆ ಸಲಹೆ ನೀಡಿದ್ದಾರೆ. ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಗುಬ್ಬಚ್ಚಿ ಶಾಲೆ) ಆವರಣದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ
ವಿಶ್ವ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಗುಬ್ಬಚ್ಚಿ ಹಬ್ಬ ಆಚರಿಸಲಾಯಿತು ಪಕ್ಷಿಗಳಿಗೆ ನೀರಿನ ಬೌಲು ಅಳವಡಿಸಿ ನೀರನ್ನು ಹಾಕುವ ಮೂಲಕ ಚಾಲನೆ ನೀಡಲಾಯಿತು
ನಂತರ ಪಕ್ಷಿಗಳಿಗೆ ಪೋಷಣೆಯ ಕಾಳಜಿಯೊಂದಿಗೆ ಪ್ರತಿ ಮಕ್ಕಳು ತಮ್ಮ ಮನೆಯಲ್ಲಿ ನೀರಿನ ಬಟ್ಟಲು ಇಡುವಂತೆ ವಿತರಿಸಿ ಮಾತನಾಡಿದ ಅವರುಇಂದು ಕೃಷಿಗೆ ಕ್ರಿಮಿನಾಶಕಗಳನ್ನು ಬಳಸಲಾಗುತ್ತಿದೆ. ಇದು ವಿಷಕಾರಿಯಾಗಿದ್ದು, ಗುಬ್ಬಿಗಳು ಸಾವನಪ್ಪುತ್ತಿದೆ.
ಗುಬ್ಬಚ್ಚಿ ಉಳಿಸಿದರೆ ಪರಿಸರದ ಉಳಿವು. ಮನುಷ್ಯರು ನಾವು ಮಾತ್ರ ಬದುಕದೆ, ಎಲ್ಲಾ ಜೀವಿಗಳು ಬದುಕಲು ಅವಕಾಶ ಮಾಡಿಕೊಡಬೇಕೆಂದು ಹೇಳಿದರು.
ಸುಮಾರು 25ಕ್ಕೂ ಅಧಿಕ ಗುಬ್ಬಿಗಳ ಪ್ರಬೇಧವಿದೆ.
ಆದರೆ ಗುಬ್ಬಿ ಸಂತತಿ ಇಂದು ಅಳಿವಿನಂಚಿನಲ್ಲಿದೆ. ಮನುಷ್ಯನಿಂದ ಗುಬ್ಬಿಗೆ ಕಂಟಕ ಎದುರಾಗಿದೆ ಎಂದರು. ವಾಸಿಸಲು ಪೂರಕ ವಾತಾವರಣ ಇಲ್ಲದಿರುವುದು ಗುಬ್ಬಿ ಸಂತತಿ ಇಳಿಮುಖವಾಗಲು ಪ್ರಮುಖ ಕಾರಣ. ಗುಬ್ಬಿಯ ಸಂಕುಲವನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ನಂತರ ಮಾತನಾಡಿದ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ
ಗುಬ್ಬಿ ಕಾಣಲು ಸಿಗುತ್ತಿಲ್ಲ. ಆದರೆ ನಮ್ಮ ಬಾಲ್ಯವನ್ನು ನೆನಪಿಡಿಸಿಕೊಂಡರೆ ಗುಬ್ಬಚ್ಚಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು.
ಆದರೆ ಇಂದು ಗುಬ್ಬಚ್ಚಿ ಸೇರಿದಂತೆ ಹಲವು ಪಕ್ಷಿ ಸಂಕುಲ ಅವಸಾನದಂಚಿನಲ್ಲಿದೆ ಎಂದರು.

ವಿಶೇಷವಾಗಿ ಮಕ್ಕಳಿಗೆ ಜಾಗೃತಿ ಮೂಡಿಸಲು ವಿವಿಧ ಪಕ್ಷಿಗಳ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರಕೃತಿ ಸಮತೋಲನಕ್ಕಾಗಿ ಗುಬ್ಬಚ್ಚಿಗಳನ್ನು ಉಳಿಸೋಣ

ಬೇಸಿಗೆಯ ಬಿಸಿಲಿನ ತಾಪದಿಂದ ಪ್ರಾಣಿ ಪಕ್ಷಿಗಳನ್ನು ರಕ್ಷಿಸೋಣ

ಅಳಿದು ಹೋಗುತ್ತಿರುವ ಗುಬ್ಬಚ್ಚಿ ಸಂಕುಲಗಳ ಉಳಿವಿಗಾಗಿ ಜನಜಾಗೃತಿ ಮೂಡಿಸೋಣ ನಶಿಸಿ ಹೋಗುತ್ತಿರುವ ಗುಬ್ಬಚ್ಚಿ ಸಂಕುಲವನ್ನು ಸಂರಕ್ಷಿಸೋಣ
ಎಂಬ ಘೋಷವಾಕ್ಯ ನಾಮಫಲಕದ ಮೂಲಕ ಪಕ್ಷಿಗಳ ಸಂರಕ್ಷಣೆಯ ಸಂದೇಶ ಸಾರಿದರು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಕ್ಷಿ ತಜ್ಞರು ಹಾಗೂ ಪರಿಸರವಾದಿ ಸಪ್ತ ಗಿರೀಶ್ ಎಂ ಕೆ,ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅರ್ಧ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾಕ್ಟರ್ ಆರ್ ಎಚ್ ಪವಿತ್ರ, ಹಿರಿಯ ಸಮಾಜಸೇವಕರಾದ ಕೆ ರಘುರಾಮ್ ವಾಜಪೇಯಿ,
ಪರಿಸರ ಪ್ರೇಮಿ ಶ್ರೀನಿವಾಸ್ ಭಾಷ್ಯಂ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಕುಮಾರ್, ಅಜಯ್ ಶಾಸ್ತ್ರಿ, ಬೈರತಿಯ ಲಿಂಗರಾಜು, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್ , ದಿವ್ಯ ಹಾಗೂ ಇನ್ನಿತರರು ಭಾಗವಹಿಸಿದ್ದರು

ವರದಿ :ನಂದಿನಿ ಮೈಸೂರು

https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

Leave a Reply

Your email address will not be published. Required fields are marked *