ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಮಪತ್ರ ಸಲ್ಲಿಸಿದರು
ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಈ ವೇಳೆ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಾಗೂ ಕೆ ಆರ್ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ನಗರ ಬಿಜೆಪಿ ಉಪಾಧ್ಯಕ್ಷರಾದ ರುದ್ರಮೂರ್ತಿ. ಬಿಜೆಪಿ ಮುಖಂಡರಾದ ಎನ್. ಪ್ರದೀಪ್ ಕುಮಾರ್. ಉಪಸ್ಥಿತರಿದ್ದರು
ನಾಮಪತ್ರ ಸಲ್ಲಿಕೆ ವೇಳೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪುತ್ರ ಯದುವೀರ್ ಒಡೆಯರ್ ಅವರಿಗೆ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆ ವೇಳೆ ಯದುವೀರ್ ಒಡೆಯರ್ 5 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿಕೊಂಡಿದ್ದು, ತಮ್ಮ ಒಡೆತನದಲ್ಲಿ ಯಾವುದೇ ಮನೆ, ಕೃಷಿ ಭೂಮಿ, ನಿವೇಶನ ಮತ್ತು ಕಾರು ಹೊಂದಿಲ್ಲವೆಂದು ಯದುವೀರ್ ಒಡೆಯರ್ ಅಫಿಡವಿಟ್ನಲ್ಲಿ ಮಾಹಿತಿ ನೀಡಿದ್ದಾರೆ.
4 ಕೆಜಿ ಚಿನ್ನ: ತಮ್ಮ ಅಫಿಡವಿಟ್ ನಲ್ಲಿ ಘೋಷಿಸಿಕೊಂಡಿರುವಂತೆ ಯದುವೀರ್ ಬಳಿ 1 ಲಕ್ಷ ರೂಪಾಯಿ ನಗದು ಹೊಂದಿದ್ದು, ವಿವಿಧ ಬ್ಯಾಂಕ್ ಖಾತೆಗಳಲ್ಲಿ ಸುಮಾರು 1.36 ಕೋಟಿ ರೂ. ಹೊಂದಿದ್ದಾರೆ. ಇದರ ಜೊತೆಗೆ 3.25 ಕೋಟಿ ಮೌಲ್ಯದ 4 ಕೆಜಿ ಚಿನ್ನ, 14 ಲಕ್ಷ ರೂಪಾಯಿ ಮೌಲ್ಯದ 20 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 4.99 ಕೋಟಿ ರೂಪಾಯಿ ಚರಾಸ್ತಿ ಹೊಂದಿರುವುದಾಗಿ ನಾಮಪತ್ರ ಸಲ್ಲಿಕೆ ವೇಳೆ ಯದುವೀರ್ ಒಡೆಯರ್ ಘೋಷಿಸಿಕೊಂಡಿದ್ದಾರೆ. ಅಂತೆಯೇ ಯದುವೀರ್ ಪತ್ನಿ ತ್ರಿಷಿಕಾ ಅವರು, 75 ಸಾವಿರ ನಗದು, ಬ್ಯಾಂಕ್ನಲ್ಲಿ 1 ಲಕ್ಷ ರೂಪಾಯಿ ಹಣ ಠೇವಣಿ ಹೊಂದಿದ್ದಾರೆ. 5.5 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ಚಿನ್ನದ ಗಟ್ಟಿ , 90 ಲಕ್ಷ ರೂಪಾಯಿ ಮೌಲ್ಯದ 2 ಕೆಜಿ ಚಿನ್ನ ಮತ್ತು 7 ಲಕ್ಷ ರೂಪಾಯಿ ಮೌಲ್ಯದ 10 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ತ್ರಿಷಿಕಾ ಒಟ್ಟು 1.04 ಕೋಟಿ ರೂಪಾಯಿ ಮೌಲ್ಯದ ಚಿರಾಸ್ತಿಯನ್ನು ಹೊಂದಿದ್ದಾರೆ.
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

