ಗದಗದಲ್ಲಿ ಪ್ರಲ್ಹಾದ ಮಹಿಷಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಶಾಲಾ ಕಟ್ಟಡಕ್ಕೆ ಭೂಮಿಪೂಜೆ
ಗದಗ: ಕಳಸಾಪುರ ಗ್ರಾಮದಲ್ಲಿ ಪ್ರಲ್ಹಾದ ಮಹಿಷಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ಭೂಮಿಪೂಜೆ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನೆರವೇರಿಸಲಾಯಿತು.

ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ವತಿಯಿಂದ ಸ್ಥಾಪನೆಯಾಗುತ್ತಿರುವ ಈ ಶಾಲೆ ಕೇಂದ್ರಿಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಪಠ್ಯಕ್ರಮದಡಿ ಕಾರ್ಯನಿರ್ವಹಿಸಲಿದ್ದು, ಇದು ಸಂಸ್ಥೆಯ 23ನೇ ಶಾಲೆಯಾಗಿರುತ್ತದೆ.
ಈ ಶಿಕ್ಷಣ ಸಂಸ್ಥೆಯನ್ನು ದಾನಿಗಳ ಸಹಕಾರದೊಂದಿಗೆ ಕರ್ನಾಟಕ ಸರ್ಕಾರದ ಪೂರ್ವ ಮುಖ್ಯ ಕಾರ್ಯದರ್ಶಿಗಳಾದ ದಿವಂಗತ ಪ್ರಲ್ಹಾದ ಬಿಂದುರಾವ್ ಮಹಿಷಿಯವರ ಸ್ಮರಣಾರ್ಥ ನಿರ್ಮಿಸಲಾಗುತ್ತಿದೆ. ಸಮಾಜಮುಖಿ ಶಿಕ್ಷಣ ಹಾಗೂ ಮೌಲ್ಯಾಧಾರಿತ ಬೋಧನೆ ನೀಡುವ ಉದ್ದೇಶದಿಂದ ಈ ಶಾಲೆ ಆರಂಭವಾಗುತ್ತಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಡಾ. ಮೀನಾ ದೇಶಪಾಂಡೆ ಮಹಿಷಿ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ರಾಷ್ಟ್ರೋತ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ನಾ. ದಿನೇಶ್ ಹೆಗ್ಡೆ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಾಶಯ ಕೋರಿದರು.
2027–28ನೇ ಶೈಕ್ಷಣಿಕ ವರ್ಷದಿಂದ ಶಾಲೆ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲಿದ್ದು, ಗದಗ ಹಾಗೂ ಸುತ್ತಮುತ್ತಲಿನ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸುವ ನಿರೀಕ್ಷೆಯಿದೆ.



