ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಶಿವಮೊಗ್ಗ ಮಹಿಳಾ ವಿಭಾಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಶಿವಮೊಗ್ಗ ಮಹಿಳಾ ವಿಭಾಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ


ಹಿಂದ್ ಸಮಾಚಾರ ನ್ಯೂಸ್ ಡೆಸ್ಕ್ , ಶಿವಮೊಗ್ಗ | ಮಾರ್ಚ್ 15

ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಶಿವಮೊಗ್ಗ ಘಟಕದ ಮಹಿಳಾ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಸಮಾಜದ ಹಿರಿಯ ತಾಯಂದಿರನ್ನು ಹಾರ, ಶಾಲು ಹಾಗೂ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಹಿಳೆಯರ ಸಮಾಜದ ಅಭಿವೃದ್ಧಿಯಲ್ಲಿ ಇರುವ ಪ್ರಮುಖ ಪಾತ್ರವನ್ನು ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದ ಖಜಾಂಜಿ ಶ್ರೀಮತಿ ಸಾವಿತ್ರಿ ಪೊದುವಾಳ್, ಕಾರ್ಯದರ್ಶಿ ಶ್ರೀಮತಿ ಸಿಂಧು ಸತೀಶ್, ನಾಯರ್ ಸಮಾಜದ ಅಧ್ಯಕ್ಷ ಸುಧಾಕರ ಪೊದುವಾಳ್, ರಾಜ್ಯ ಸಮಿತಿ ಸದಸ್ಯ ಕೆ.ಸಿ.ಬಿ. ಪಿಳ್ಳೆ (IRS) ಹಾಗೂ ರಾಜ್ಯ ಉಪಾಧ್ಯಕ್ಷ ಎನ್.ಡಿ. ಸತೀಶ್ ಅವರು ಮಾತನಾಡಿ ಮಹಿಳಾ ದಿನಾಚರಣೆಯ ಮಹತ್ವ ಮತ್ತು ಮಹಿಳೆಯರ ಸಾಧನೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗದ ನಾಯರ್ ಸಮಾಜದ ಪ್ರಮುಖರು ಹಾಗೂ ಮಹಿಳಾ ವಿಭಾಗದ ಎಲ್ಲಾ ಸದಸ್ಯರು ಮತ್ತು ತಾಯಂದಿರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ನಾಯರ್ ಸಮಾಜದ ಕಾರ್ಯದರ್ಶಿ ರಂಜಿತ್ ಪಿಳ್ಳೆ ಅವರು ವಂದನಾರ್ಪಣೆ ಸಲ್ಲಿಸಿದರು.

Leave a Reply

Your email address will not be published. Required fields are marked *