ಬೆಳಗಾವಿಯಲ್ಲಿ ಮಾನವ ಹಕ್ಕುಗಳ ಜಾಗೃತಿ ಕಾರ್ಯಕ್ರಮ; ಶ್ರೀನಿವಾಸ್ ಗೌಡ್ರುಗೆ ಸನ್ಮಾನ

ಬೆಳಗಾವಿಯಲ್ಲಿ ಮಾನವ ಹಕ್ಕುಗಳ ಜಾಗೃತಿ ಕಾರ್ಯಕ್ರಮ; ಶ್ರೀನಿವಾಸ್ ಗೌಡ್ರುಗೆ ಸನ್ಮಾನ


ಹಿಂದ್ ಸಮಾಚಾರ ನ್ಯೂಸ್ | ಮಾರ್ಚ್ 2026:
ಬೆಳಗಾವಿ: ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀನಿವಾಸ್ ಗೌಡ್ರು ಅವರು ಮಾರ್ಚ್ 22, ಭಾನುವಾರದಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡರು. ಈ ವೇಳೆ ಜಿಲ್ಲಾ ಮಾನವ ಹಕ್ಕುಗಳ ಸಮಿತಿ ವತಿಯಿಂದ ಸಾರ್ವಜನಿಕರಲ್ಲಿ ಮಾನವ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀನಿವಾಸ್ ಗೌಡ್ರು ಅವರು, ಸಮಾಜದಲ್ಲಿ ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವುದು ಅತ್ಯಾವಶ್ಯಕ ಎಂದು ಹೇಳಿದರು. ವಿಶೇಷವಾಗಿ ಮಹಿಳೆಯರು ಅಬಲೆಯಲ್ಲ, ಸಬಲೆಯರು ಎಂಬ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹೋದರ-ಸಹೋದರಿಯರಿಗೆ ಮಾನವ ಹಕ್ಕುಗಳ ಬಗ್ಗೆ ಸಲಹೆಗಳನ್ನು ನೀಡುವ ಮೂಲಕ ಆತ್ಮವಿಶ್ವಾಸ ಹಾಗೂ ಧೈರ್ಯವನ್ನು ತುಂಬಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ವತಿಯಿಂದ ಶ್ರೀನಿವಾಸ್ ಗೌಡ್ರು ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಕಾರ್ಯಕ್ರಮವು ಸಮಾಜದಲ್ಲಿ ಮಾನವ ಹಕ್ಕುಗಳ ಅರಿವು ಹೆಚ್ಚಿಸುವ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

ವರದಿ:- ಪ್ರವೀಣ್ ಶಿವಲಿಂಗಯ್ಯ

Leave a Reply

Your email address will not be published. Required fields are marked *