ಜೀವನ್ ಸೌಹಾರ್ದ ಸಹಕಾರಿ ಸಂಘದ ನೂತನ ನಿರ್ದೇಶಕರಾಗಿ ಶ್ರೀ ಗಲ್ಲಿ ವೆಂಕಟೇಶ್ ಸೂರನಗದ್ದೆ ಆಯ್ಕೆ

ಜೀವನ್ ಸೌಹಾರ್ದ ಸಹಕಾರಿ ಸಂಘದ ನೂತನ ನಿರ್ದೇಶಕರಾಗಿ ಶ್ರೀ ಗಲ್ಲಿ ವೆಂಕಟೇಶ್ ಸೂರನಗದ್ದೆ ಆಯ್ಕೆ

ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘದ ನಿರ್ದೇಶಕರಾದ ಶ್ರೀ ಗಲ್ಲಿ ವೆಂಕಟೇಶ್ ಸೂರನಗದ್ದೆ ಅವರು ಜೀವನ್ ಸೌಹಾರ್ದ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವುದು ಸಂತಸದ ಸಂಗತಿಯಾಗಿದೆ.

ಈ ಹಿನ್ನೆಲೆಯಲ್ಲಿ, ಸಂಘದ ವತಿಯಿಂದ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಶ್ರೀ ವೆಂಕಟೇಶ್ ಅವರ ಸೇವಾ ಮನೋಭಾವ, ನಾಯಕತ್ವ ಮತ್ತು ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

ಸಂಘದ ಅಭಿವೃದ್ಧಿ ಹಾಗೂ ಸದಸ್ಯರ ಕಲ್ಯಾಣಕ್ಕಾಗಿ ಅವರು ಇನ್ನಷ್ಟು ಉತ್ತಮ ಕಾರ್ಯಗಳನ್ನು ನೆರವೇರಿಸುವರೆಂದು ಆಶಾಭಾವನೆ ವ್ಯಕ್ತಪಡಿಸಲಾಯಿತು.
ಈ ಸಾಧನೆಗೆ ಸಮಾಜದ ವಿವಿಧ ವಲಯಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ

ವರದಿ : ಮೇಘನ ಗಣೇಶ್

Leave a Reply

Your email address will not be published. Required fields are marked *