ಶಿವಮೊಗ್ಗ: ಶಿವಮೊಗ್ಗದಲ್ಲಿ ಮತ್ತಷ್ಟು ಬಿಗಿ ಬಂದೋಬಸ್ತ್ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಕಟ್ಟೆಚ್ಚರ – ಎಸ್ ಪಿ ಲಕ್ಷ್ಮೀ ಪ್ರಸಾದ್ ಸ್ಪಷ್ಟನೆ.

ಸೋಮವಾರ ಬಜರಂಗ ದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಬಳಿಕ ಪ್ರಕ್ಷುಬ್ದ ವಾತಾವರಣ ಸೃಷ್ಟಿ ಯಾಗಿದ್ದು ಇದೀಗ ಇಡೀ ಶಿವಮೊಗ್ಗವನ್ನು ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ನಿನ್ನೆ ಹರ್ಷ ಮೃತದೇಹದ ಮೆರವಣಿಗೆ ವೇಳೆ ದುಷ್ಕರ್ಮಿಗಳು ಶೋ ರೂಂ, ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.ಈ ಹಿನ್ನೆಲೆಯಲ್ಲಿ ಮತ್ತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಲ್ಲಡೆ ಸುತ್ತುವರಿದಿದ್ದಾರೆ. ಹಳೇ ಶಿವಮೊಗ್ಗದ ಬಡಾವಣೆಗಳಾದ ಗಾಂಧಿ ಬಜಾರ್, ರವಿವರ್ಮ ಬೀದಿ, ಓಟಿ ರಸ್ತೆ ವಂದನ ಚಲನಚಿತ್ರ ಮಂದಿರ, ಸಿದ್ದಯ್ಯ ರಸ್ತೆ ಎಂಕೆಕೆ ರಸ್ತೆ ಯಿಂದ ಎಎ ವೃತ್ತಕ್ಕೆ ಬಂದು ತಲುಪಿದೆ. 110 ಆರ್ ಎಎಫ್ ತುಕಡಿಗಳು ಈ ರೂಟ್ ಮಾರ್ಚ್ ನಲ್ಲಿ ಪಾಲ್ಗೊಂಡಿದ್ದಾರೆ.

ಆಕರ್ಷಕ ಕಮ್ಮಿ ಬಡ್ಡಿದರ ಗ್ರಹ ಸಾಲಕ್ಕಾಗಿ ಸಂಪರ್ಕಿಸಿ : 9535995455 , 9880432555
ಈಗಾಗಲೇ ಎರಡು ದಿನಗಳ ಕಾಲ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಶಿವಮೊಗ್ಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಗರದೆಲ್ಲೆಡೆ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು ಹಲವು ಕಡೆ ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದಾರೆ.ಶಿವಮೊಗ್ಗ ಜಿಲ್ಲೆ ಇದೀಗ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ಶಿವಮೊಗ್ಗ ನಗರದಲ್ಲಿ ಜರುಗಿದ ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ರ್ಯಾಪಿಡ್ ಆಕ್ಷನ್ ಫೋರ್ಸ್ ನಿಂದ ರೂಟ್ ಮಾರ್ಚ್ ನಡೆಸಿದ್ದಾರೆ.

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್-ಟೆಕ್ ಇಂಟರ್ನ್ಯಾಷನಲ್ Mob: 9880432555.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 9880432555.
ಮೂರು ಎಸ್ಪಿಗಳು, ಒಬ್ಬ ಹೆಚ್ಚುವರಿ ಎಸ್ಪಿ, 12 ಡಿವೈಎಸ್ಪಿಗಳು, 39 ಪಿಐಗಳು, 54 ಪಿಎಸ್ಐಗಳು, 48 ಎಎಸ್ಐಗಳು, 819 ಪಿಸಿಗಳು, 20 ಕೆಎಸ್ಆರ್ ಪಿ, ಬೆಟಾಲಿಯನ್ ಗಳು, 10 ಡಿಎಆರ್ ಬೆಟಾಲಿಯನ್ ಗಳು ಮತ್ತು ಒಂದು ಆರ್ ಎಫ್ ಎಫ್ ಬೆಟಾಲಿಯನ್ ಅನ್ನು ಸರ್ಕಾರ ನಿಯೋಜಿಸಿದೆ ಎಂದು ಎಸ್ ಪಿ ಬಿ ಎಂ ಲಕ್ಷ್ಮೀ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ವರದಿ: ಸಿಸಿಲ್ ಸೋಮನ್


