ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ಗ್ಲೋಬಲ್ ತಾಂತ್ರಿಕ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಆಡಿದ ಮಾತುಗಳು.

ನೀವೆಲ್ಲರೂ ದೇಶಕ್ಕೆ ದೊಡ್ಡ ಆಸ್ತಿಯಾಗಬೇಕು. ಇದು ನಮ್ಮೆಲ್ಲರ ಆಸೆ. ನಿಮ್ಮನ್ನು ಸರಿಯಾದ ರೀತಿಯಲ್ಲಿ ತಯಾರು ಮಾಡಬೇಕಿರುವುದು ನಮ್ಮ ಕರ್ತವ್ಯ. ಆ ನಿಟ್ಟಿನಲ್ಲಿ ಈ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಕೆಲಸ ಮಾಡುತ್ತಿದೆ. ನಿಮಗೆ ಸಾಧ್ಯವಾದಷ್ಟು ಉತ್ತಮ ಗುಣಮುಟ್ಟದ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದೇವೆ.
ನಾವೆಲ್ಲರೂ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸುತ್ತಿದ್ದೇವೆ. ಶತಮಾನೋತ್ಸವ ಆಚರಣೆ ಮಾಡಲು ನಮಗೆ ಅವಕಾಶ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟಗಾರರು ತಮ್ಮ ತ್ಯಾಗ ಬಲಿದಾನಗಳ ಮೂಲಕ ನಮಗೆ ಸ್ವಾತಂತ್ರ್ಯ, ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಎಲ್ಲವನ್ನು ಕೊಟ್ಟಿದ್ದಾರೆ. ಹೀಗಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿರುವುದು ನಮ್ಮೆಲ್ಲರ ಭಾಗ್ಯ.

ನಾನು ಈ ಶಿಕ್ಷಣ ಸಂಸ್ಥೆಯ ಹಾಗೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೇನೆ. ಹೀಗಾಗಿ ನಾನು ನಿಮ್ಮನ್ನೆಲ್ಲ ಐತಿಹಾಸಿಕ ಪಾದಯಾತ್ರೆಯಲ್ಲಿ ಭಾಗವಹಿಸಲು ಆಹ್ವಾನಿಸುತ್ತಿದ್ದೇನೆ. ಈ ಪಾದಯಾತ್ರೆಗೆ ಎಲ್ಲ ವರ್ಗದವರಿಗೆ ಆಹ್ವಾನ ನೀಡಲಾಗಿದ್ದು, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೆ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯಲ್ಲಿ ನೀವು ರಾಷ್ಟ್ರಧ್ವಜ ಹಿಡಿದು ಭಾಗವಹಿಸಿ ಎಂದು ನಾನು ಆಹ್ವಾನ ನೀಡುತ್ತೇನೆ. ಪಾದಯಾತ್ರೆಯಲ್ಲಿ ಭಾಗವಹಿಸುವವರು ಕಾಲೇಜಿನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ. ನಿಮ್ಮ ನಡಿಗೆ ದೇಶಕ್ಕೆ ಕೊಡುಗೆಯಾಗಬೇಕು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



