ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡುವ 2020-21 ನೇ ಸಾಲಿನ ಅಸಾಧಾರಣ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ – ಕು.ಸುಹಾಸ್

ಸಿದ್ದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡುವ 2020-21 ನೇ ಸಾಲಿನ ಅಸಾಧಾರಣ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ – ಕು.ಸುಹಾಸ್.

ಕು.ಸುಹಾಸ್
 ತಾಲೂಕಿನ ಕೋಲಶಿರ್ಸಿಯ ಕು.ಸುಹಾಸ್ ನಾಗರಾಜ ನಾಯ್ಕ ಮಾಳ್ಕೋಡಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡುವ 2020-21 ನೇ ಸಾಲಿನ ಅಸಾಧಾರಣ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾನೆ.    
          ಅ.15 ರಂದು ನಡೆಯುವ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುತ್ತಿದೆ.    ಪಟ್ಟಣದ ಪ್ರಶಾಂತಿ ಪ್ರೌಢಶಾಲೆಯ 8 ನೇ ತರಗತಿಯ ವಿದ್ಯಾರ್ಥಿಯಾಗಿರುವ ಕು.ಸುಹಾಸ್ ನಾಯ್ಕ ಮಾಳ್ಕೋಡ ಸೃಜನಾತ್ಮಕ ಕಲೆಗಳಾದ ಚಿತ್ರಕಲೆ, ಜೇಡಿಮಣ್ಣಿನ ಕಲೆ, ಕರಕುಶಲ ಕಲಾಕೃತಿಗಳ ರಚನೆಯಲ್ಲಿ ಬಾಲ್ಯದಲ್ಲಿಯೇ ಆಸಕ್ತಿಯನ್ನು ಬೆಳೆಸಿಕೊಂಡಿದ್ದಾನೆ. ರಾಜ್ಯಮಟ್ಟದ ಕಲಾಭೂಷಣ ಪುರಸ್ಕಾರ, ಕಲಾಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾನೆ.
        2 ನೇ ತರಗತಿಯಲ್ಲಿ ಇರುವಾಗಲೇ ಶಿಕ್ಷಣ ಇಲಾಖೆ ನಡೆಸುವ ಪ್ರತಿಭಾ ಕಾರಂಜಿ ಸ್ಪರ್ಧೆಯ ಚಿತ್ರಕಲೆಯಲ್ಲಿ ಆಯ್ಕೆಯಾಗುವ ಮೂಲಕ ತನ್ನಲ್ಲಿಯ ಕಲಾಶಕ್ತಿಯನ್ನು ಹೆಚ್ಚಿಸಿಕೊಂಡಿದ್ದಾನೆ. ನಂತರದಲ್ಲಿ ನಿರಂತರವಾಗಿ ಈವರೆಗೂ ತಾಲೂಕು ಹಾಗೂ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ.ನಂತರದಲ್ಲಿ ಭಾಗವಹಿಸಿದ್ದ ಎಲ್ಲಾ ಚಿತ್ರಕಲಾ ಸ್ಪರ್ಧೆಗಳಲ್ಲಿಯೂ ಬಹುಮಾನಗಳನ್ನು ಪಡೆದುಕೊಂಡಿರುವುದು ಇವನ ಸಾಧನೆಗೆ ಹಿಡಿದ ಕನ್ನಡಿಯಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಜಿಲ್ಲಾಮಟ್ಟದಲ್ಲಿ ನಡೆದ ’ಕಲಾಶ್ರೀ’ ಆಯ್ಕೆ ಶಿಬಿರದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಿ ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಗೆ ಆಯ್ಕೆಯಾಗಿರುವುದು ಇತನ ಬಹುದೊಡ್ಡ ಸಾಧನೆಯಾಗಿದೆ. ಈ ಹಿಂದೆ ಶಾಂತಿ ಮತ್ತು ಮಾನವೀಯತೆ ರಾಷ್ಟ್ರೀಯ ಅಭಿಯಾನ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಸುಹಾಸ್ ಆಯ್ಕೆಯಾಗಿದ್ದನು.
 
ಅಂತರಾಷ್ಟ್ರೀಯ ಚಿಂತನ ಚಿತ್ರಕಲಾ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮೊದಲನೇ ರ್‍ಯಾಂಕ್ ಪಡೆದಿರುವುದು ಅಭಿಮಾನದ ಸಂಗತಿ. ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಪೆಢರೇಶನ ನವದೆಹಲಿ ನಡೆಸಿದ ಬೆಳಗಾಂವ ವಿಭಾಗ ಮಟ್ಟದ ಸ್ಪರ್ಧೆಯಲ್ಲಯೂ ಆಯ್ಕೆಯಾಗಿದ್ದಾನೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಏರ್ಪಡಿಸಿದ ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಭಾಗವಹಿಸಿ ಫಲಿತಾಂಶದ ನಿರೀಕ್ಷೆಯಲ್ಲಿದ್ದಾನೆ.

ಕು.ಸುಹಾಸ್ ತನ್ನ ವಯಸ್ಸಿಗೆ ಮೀರಿದ ಪ್ರತಿಭೆಯನ್ನು ಹೊಂದಿದ್ದು ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ದಾನೆ. ತಾಲೂಕಿನ ಸುತ್ತಮುತ್ತ ಯಾವುದೇ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದರೂ ಬಹುಮಾನ ಕಟ್ಟಿಟ್ಟ ಬುತ್ತಿ ಎನ್ನುವಷ್ಟರ ಮಟ್ಟಿಗೆ ಭರವಸೆಯನ್ನು ಮೂಡಿಸಿದ್ದಾನೆ. 
    
ಚಿತ್ರಕಲೆಯಲ್ಲಿ ವಿಶೇಷವಾದ ಆಸಕ್ತಿಯನ್ನು ಹೊಂದಿರುವ ಈತ ರಾಷ್ಟ್ರ ನಾಯಕರುಗಳ ಹಾಗೂ ಸ್ನೇಹಿತರು, ಬಂಧುಗಳ ಜನ್ಮದಿನದಂದು ಅವರ ಚಿತ್ರವನ್ನು ಬರೆದು ಶುಭಹಾರೈಸುವ ಪರಿಪಾಠ ಬೆಳೆಸಿಕೊಂಡಿದ್ದಾನೆ.

ಈ ಹಿಂದೆ ಕಲಾಭೂಷಣ ಪುರಸ್ಕಾರ ಪಡೆದಿದ್ದ ಸುಹಾಸ್.ರಾಣಿಬೆನ್ನೂರಿನ ಕಾಗದ ಸಾಂಗತ್ಯ ವೇದಿಕೆ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ಚಿತ್ರಕಲಾ ಸ್ಪರ್ಧೆ-2020 ರಲ್ಲಿ ಭಾಗವಹಿಸಿದ 1868 ಮಕ್ಕಳಲ್ಲಿ ವಿಭಿನ್ನತೆಯಿಂದ ಕೂಡಿದ ಚಿತ್ರವನ್ನು ರಚಿಸಿದ ಕಾರಣಕ್ಕೆ ’ಕಲಾಭೂಷಣ ಪುರಸ್ಕಾರಕ್ಕೆ’ ಕು.ಸುಹಾಸ್ ಮಾಳ್ಕೊಡನನ್ನು ಆಯ್ಕೆ ಮಾಡಲಾಗಿದೆ. ತನ್ನ 9ನೇ ವಯಸ್ಸಿನಲ್ಲಿಯೇ ಚಿತ್ರಕಲಾ ಪ್ರದರ್ಶನದಲ್ಲಿ ಕಲಾಕೃತಿಗಳ ಪ್ರದರ್ಶನ ಮಾಡಿರುತ್ತಾನೆ.

ವರದಿ: ನಾಗರಾಜ ನಾಯ್ಕ

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *