ಮೈಸೂರು/ಟಿ.ನರಸೀಪುರ: ಬ್ರಹ್ಮಶ್ರೀ ನಾರಾಯಣ ಗುರು ರವರ 166 ನೇ ಜನ್ಮ ಜಯಂತಿಯನ್ನು ತಾಲ್ಲೂಕು ಆಡಳಿತ,ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಆರ್ಯ ಈಡಿಗರ ಸಂಘದ ವತಿಯಿಂದ ಸರಳವಾಗಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕ ಎಂ.ಅಶ್ವಿನ್ ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನೆರವೇರಿಸಿ ಮಾತನಾಡಿ ನಾರಾಯಣಗುರುಗಳು ಸಮಸಮಾಜದ ನಿರ್ಮಾಣಕ್ಕೆ ಹೋರಾಡಿದ ಮಹಾನ್ ಪುರುಷ . ಇವರ ಆದರ್ಶ ಹಾಗೂ ತತ್ವ ಸಿದ್ಧಾಂತಗಳನ್ನ ಮೈಗೂಡಿಸಿಕೊಂಡು ನಾವೆಲ್ಲರೂ ಮುನ್ನಡೆಯಬೇಕಿದೆ.ಅವರು ಮಾಡಿರುವಂತಹ ಸಾಮಾಜಿಕ ಚಳುವಳಿಗಳನ್ನು ಗುರುತಿಸಿ ಜನರಿಗೆ ತಿಳಿಸುವ ಕಾರ್ಯವಾಗಬೇಕಿದೆ ಎಂದರು.
ಸಮಾರಂಭದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅದ್ಯಕ್ಷರು ಹಾಗೂ ತಹಶಿಲ್ದಾರ್ ಗೀತಾ,ತಾ.ರಂ.ಕಾರ್ಯ ನಿರ್ವಾಹಕ ಅಧಿಕಾರಿ ಸಿ.ಕೃಷ್ಣ,ಮುಖ್ಯ ಭಾಷಣಕಾರ ಕರೋಹಟ್ಟಿ ಪ್ರಭುಸ್ವಾಮಿ, ಮಾಜಿ ಜಿ.ಪಂ.ಸದಸ್ಯ ಜಯಪಾಲ್ ಭರಣಿ,ಆರ್ಯ ಈಡಿಗರ ಸಂಘದ ತಾಲ್ಲೂಕು ಅದ್ಯಕ್ಷ ಮಂಜುಕುಮಾರ್,ಗೌರವಾದ್ಯಕ್ಷ ಜಯರಾಮ್,ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್ ಸೇರಿದಂತೆ ಇತರರಿದ್ದರು.
ವರದಿ : ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

