
ನಂಜನಗೂಡು:ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕಾಂಗ್ರೆಸ್ ಪಾದಯಾತ್ರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಆಯೋಜಿಸಿದ್ದ ಸಭೆ ಹಾಗೂ ಪಾದಯಾತ್ರೆಯಲ್ಲಿ ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿದರು.
ಕಾರ್ಯಾಧ್ಯಕ್ಷರಾದ ಆರ್.ಧ್ರುವನಾರಾಯಣ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಕ್ಷೇತ್ರದ ಮಾಜಿ ಶಾಸಕರಾದ ಕೇಶವಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ ತಿಮ್ಮಯ್ಯ, ಶಾಸಕರಾದ ಅನಿಲ್ ಚಿಕ್ಕಮಾದು ಹಾಗೂ ಕಾರ್ಯಕರ್ತರ ಜತೆ ಹೆಜ್ಜೆ ಹಾಕುವ ಮೂಲಕ ದೇಶದ ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸಿದರು.
ವರದಿ : ನಂದಿನಿ ಮೈಸೂರು



