ಮೈಸೂರು: ಇಂದು ಮೈಸೂರಿನ ಗಂಗೋತ್ರಿ ಬಡಾವಣೆಯ ಬಿಸಿಲು ಮಾರಮ್ಮ ದೇವಸ್ಥಾನದ ರಸ್ತೆಯಲ್ಲಿ ಅಂದಾಜು ರೂ. 40 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗ್ರಂಥಾಲಯವನ್ನು ಸಂಸದರಾದ ಪ್ರತಾಪ್ ಸಿಂಹ,ಶಾಸಕ ಎಲ್.ನಾಗೇಂದ್ರ ಅವರು ಉದ್ಘಾಟಿಸಿದರು.

ಗ್ರಂಥಾಲಯದ ನಿರ್ಮಾಣ ಕಾಮಗಾರಿ ಕುಂಠಿತವಾಗಿದ್ದನ್ನು ತಿಳಿದು ಕಟ್ಟಡ ವೀಕ್ಷಿಸಿ ಕಾಮಗಾರಿಯನ್ನು ಸುವ್ಯವಸ್ಥಿತವಾಗಿ ಶೀಘ್ರವಾಗಿ ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಮಹಾನಗರಪಾಲಿಕೆಯಿಂದ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿಯಿಂದ ಬಿಡುಗಡೆ ಮಾಡಿ ಕಟ್ಟಡವನ್ನು ಪೂರ್ಣಗೊಳಿಸಿ ಅಗತ್ಯ ಪೀಠೋಪಕರಣಗಳನ್ನು ಸರಬರಾಜು ಮಾಡಲಾಗಿದೆ.
ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯರಾದ ಶ್ರೀಮತಿ ವೇದಾವತಿ, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀ ಬಸವೇಗೌಡ, ಗಂಗೋತ್ರಿ ನಾಗರೀಕ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ಶ್ರೀ ಕಟ್ಟೆರ ಕಾರಿಯಪ್ಪ, ಚಾಮರಾಜ ಭಾ.ಜ.ಪ ಪ್ರಧಾನ ಕಾರ್ಯದರ್ಶಿ ಶ್ರೀ ರಮೇಶ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಜ್ವಲ ಶ್ರೀವತ್ಸ, ರಾಜ್ಯ ಸಹಕಾರ ಪ್ರಕೋಷ್ಠ ಸದಸ್ಯ ಶ್ರೀ ಶ್ರೀನಿವಾಸ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಸೋಮಶೇಖರ್ ರಾಜ್ ಅರಸ್, ಮಹಿಳಾ ಮೋರ್ದಾ ಉಪಾಧ್ಯಕ್ಷೆ ಶ್ರೀಮತಿ ಮೀನಾಕ್ಷಿ, ಗಂಗೋತ್ರಿ ನಾಗರೀಕ ಹಿತರಕ್ಷಣಾ ಸಮಿತಿಯ ಸದಸ್ಯರಾದ ಶ್ರೀನಿವಾಸ್ ಆರ್.ಎಸ್.ಎಸ್, ಗಂಗಾಧರ್ ಹಾಗೂ ಪದಾಧಿಕಾರಗಳು, ಮುಖಂಡರಾದ ಶಿವಶಂಕರ್, ನಾ.ಗಂಗಾಧರಪ್ಪ, ಜಿ.ವಿ ಕೃಷ್ಣ, ಗುರುದತ್, ಸುಬ್ರಮಣ್ಯ, ದೇವರಾಜು ಮತ್ತಿತರರು ಉಪಸ್ಥಿತರಿದ್ದರು.
ವರದಿ : ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

