ಬಸವ ಸಮುದಾಯ ಭವನ ಲೋಕಾರ್ಪಣೆಗೊಳಿಸಿದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ

ಹುಳಿಮಾವು: ಬಸವ ಸಮುದಾಯ ಭವನ ಲೋಕಾರ್ಪಣೆಗೊಳಿಸಿದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ.

ತಾಂಡವಪುರ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹುಳಿಮಾವು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ಸಮುದಾಯ ಭವನವನ್ನು ಕ್ಷೇತ್ರದ ಶಾಸಕರಾದ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ಸಮುದಾಯ ಭವನವನ್ನು ಉದ್ಘಾಟಿಸುವ ಮೂಲಕ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಶಾಸಕರು ಸಮುದಾಯ ಭವನ ಉತ್ತಮವಾಗಿ ನಿರ್ಮಾಣವಾಗಿದ್ದು ಗ್ರಾಮಸ್ಥರು ತಮ್ಮ ಗ್ರಾಮದ ಚಟುವಟಿಕೆಗಳಿಗೆ ಬಳಸುವ ಮೂಲಕ ಸಮುದಾಯ ಭವನವನ್ನು ಸದುಪಯೋಗ ಮಾಡಿಕೊಳ್ಳಿ ಎಂದು ಗ್ರಾಮಸ್ಥರಿಗೆ ತಿಳಿಸಿದರು ಇದೇ ವೇಳೆ ಗ್ರಾಮಸ್ಥರು ತಮ್ಮ ಹಲವಾರು ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತರುವ ಮೂಲಕ ಮನವಿ ಸಲ್ಲಿಸಿದರು ಮನವಿ ಸ್ವೀಕರಿಸಿದ ಶಾಸಕರು ನಿಮ್ಮ ಸಮಸ್ಯೆಗಳನ್ನು ಆದಷ್ಟು ಬೇಗನೆ ಸರಿಪಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಬಸವರಾಜು ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೀಲಮ್ಮ ನಾಗರಾಜು ಅಭಿಷೇಕ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನಂಜಪ್ಪ ಮುಖಂಡರಾದ ಪರಶಿವಮೂರ್ತಿ ಬಿಪಿ ಮಹಾದೇವ ದಕ್ಷಿಣಾಮೂರ್ತಿ ಗುರುಮಲ್ಲಪ್ಪ ಗ್ರಾಮ ಪಂಚಾಯಿತಿ ಸದಸ್ಯರಾದ ರವಿ ಆನಂದ್ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಶ್ರೀನಿವಾಸ್ ಪಿಡಿಒ ನಳಿನಿ ಮನಿ ಗೌಡ ಮೆಲ್ಲಹಳ್ಳಿ ರವಿ ಲಲಿತಾದ್ರಿಪುರ ಬಸವರಾಜ್ ಕೆಎಸ್ ಹುಂಡಿ ರವಿ ನಿರ್ಮಿತಿ ಕೇಂದ್ರದ ಸುಸ್ಮಿತ ಹಾಗೂ ಗ್ರಾಮದ ವೀರಶೈವ ಮುಖಂಡರು ಗ್ರಾಮಸ್ಥರು ಹಾಜರಿದ್ದರು.

ವರದಿ : ನಂದಿನಿ ಮೈಸೂರು

Leave a Reply

Your email address will not be published. Required fields are marked *