
ತುಮಕೂರು:ರಾಜ್ಯ ಮಟ್ಟದ ಭೋವಿ ಜನ ಜಾಗೃತಿ ಸಮಾವೇಶ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಮಕೂರಿನಲ್ಲಿಂದು ರಾಜ್ಯ ಮಟ್ಟದ ಭೋವಿ ಜನ ಜಾಗೃತಿ ಸಮಾವೇಶ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಚಿತ್ರದುರ್ಗ ಬೋವಿ ಗುರುಪೀಠದ ನಿರಂಜನ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಜಿ, ಸಚಿವ ಬಿ.ಸಿ.ನಾಗೇಶ, ಸಂಸದ ಜಿ.ಎಸ್. ಬಸವರಾಜ್, ಮಾಜಿ ಸಂಸದ ಜನಾರ್ಧನ್ ಸ್ವಾಮಿ, ಶಾಸಕ ಜ್ಯೋತಿ ಗಣೇಶ್ ಹಾಗೂ ಸಮಾಜದ ಮುಖಂಡರಾದ ರವಿ ಮಾಕಳಿ, ಎಂ.ವಿ.ನಾಗರಾಜ್, ಮಂಗಮ್ಮ ಮರಿಸ್ವಾಮಿ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ವರದಿ : ನಂದಿನಿ ಮೈಸೂರು



