ಎಚ್ ಡಿ ಕೋಟೆ: ಭಾರೀ ಮಳೆಗೆ ಮನೆ ಕುಸಿತ , ಪ್ರಾಣಾಪಾಯದಿಂದ ಪಾರಾದ ಕುಟುಂಬ.

ರಾಜ್ಯಾದ್ಯಂತ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನದ ಅಸ್ಥವ್ಯಸ್ಥವಾಗಿದೆ,, ಕೋಟ್ಯಾಂತರ ರೂಪಾಯಿ ಫಸಲು ನಾಶವಾಗುತ್ತಿದೆ, ಹಳ್ಳ ಕೊಳ್ಳ ತುಂಬಿ ಹರಿಯುತ್ತಿದ್ದು, ರಸ್ತೆಗಳೆಲ್ಲ ಕಿತ್ತು ಕೊರಕಲಾಗುತ್ತಿವೆ. ಜನಸಾಮಾನ್ಯರು ಓಡಾಡಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಧಾರಾಕಾರ ಮಳೆಗೆ ಎಚ್ ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದ ಶ್ರೀಮತಿ ನಾಗಮ್ಮ ಮತ್ತು ಲಕ್ಕೇಗೌಡರಿಗೆ ಸೇರಿದ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ, ಸದ್ಯ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದು, ಈಗ ವಾಸಮಾಡಲು ಮನೆ ಇಲ್ಲದ ಕಾರಣ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದು, ಸ್ಥಳಕ್ಕೆ ಸಂಬಂಧಪಟ್ಟ ಗ್ರಾಮಲೆಕ್ಕಿಗರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸರ್ಕಾರದಿಂದ ಸಿಗುವ ಸವಲತ್ತು ಕಲ್ಪಿಸುವ ಭರವಸೆ ನೀಡಿದ್ದಾರೆ.
ವರದಿ ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

