ಚಾಮರಾಜನಗರ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಸಪ್ತಾಹ ಮತ್ತು ಮಾಸಾಚರಣೆ ಕಾರ್ಯಕ್ರಮ.

ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಸಪ್ತಾಹ ಮತ್ತು ಮಾಸಾಚರಣೆ ಕಾರ್ಯಕ್ರಮ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಸಪ್ತಾಹ ಮತ್ತು ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ತಾಲೂಕಿನ ಹೊನ್ನೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಮಾತೃ ವಂದನಾ ಸಪ್ತಾಹ ಹಾಗೂ ಮಾಸಾಚರಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ ಅಧ್ಯಕ್ಷರಾದ ಇಂದಿರಾ ರವರು ಉದ್ಘಾಟಿಸಿ ಮಾತನಾಡಿ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ನಂತರ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಮಾಡುವ ಮೂಲಕ ಗರ್ಭಿಣಿಯರಿಗೆ ಪ್ರೋತ್ಸಾಹ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿಯರಾದ ಸರಸ್ವತಿ, ಪೋಷಣ ಅಭಿಯಾನ ಮೇಲ್ವಿಚಾರಕರಾದರವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಪುಟ್ಟಬಸವಯ್ಯ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಕೆ. ಎಸ್. ಮಹದೇವಯ್ಯ ಸಂಪಿಗಯ್ಯ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಬಾಣಂತಿ, ಗರ್ಭಿಣಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



