“ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿರುವ ಸಚಿವ ಎಸ್.ಟಿ.ಸೋಮಶೇಖರ್”

ಮೈಸೂರಿ: ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿರುವ ಸಚಿವ ಎಸ್.ಟಿ.ಸೋಮಶೇಖರ್.

ಸಾಂಸ್ಕೃತಿಕ ನಗರೀ ಮೈಸೂರಿನಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್‌.ಟಿ.ಸೋಮಶೇಖರ್ ಸ್ವತಃ ತಾವೇ ಪೊರಕೆ ಹಿಡಿದು ಸ್ವಚ್ಚತಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದ ಸಚಿವ ಎಸ್.ಟಿ.ಸೋಮಶೇಖರ್ ಕಸ ಗುಡಿಸುವ ಮೂಲಕ ಮಾದರಿಯಾದ ಮಿನಿಸ್ಟರ್

ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ.ದಸರಾ ವೇಳೆ ಲಕ್ಷಾಂತರ ಪ್ರವಾಸಿಗರು ಸಾಂಸ್ಕೃತಿಕ ನಗರಿಗೆ ಲಗ್ಗೆ ಇಡಲಿದ್ದಾರೆ.ಈ ವೇಳೆ ಸ್ವಚ್ಛತೆ ಜಿಲ್ಲಾಡಳಿತಕ್ಕೆ ಸವಾಲೇ ಸರಿ.ಮೈಸೂರು ನಗರವನ್ನ ಸ್ವಚ್ಛವಾಗಿಡಲು ಜಿಲ್ಲಾಡಳಿತ ಮುಂದಾಗಿದೆ.ಕೆಲವು ಸಂಘಸಂಸ್ಥೆಗಳೂ ಸಹ ಕೈಜೋಡಿಸಿದೆ. let’s do it ಸಂಸ್ಥೆ ಸಹ ಸ್ವಚ್ಛತೆಗಾಗಿ ಜಿಲ್ಲಾಡಳಿತದ ಜೊತೆ ಕೈಜೋಡಿಸಿದೆ.

ಇಂದು ಸ್ವಚ್ಛತಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಖುದ್ದು ಸ್ವಚ್ಛತೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.ಆಲನಹಳ್ಳಿಯ ಗಿರಿನಗರದ ಬಳಿ let’s do it ಸಂಸ್ಥೆಯ ಕಾರ್ಯಕರ್ತರೊಂದಿಗೆ ಸೇರಿ ರಸ್ತೆ ಸ್ವಚ್ಛತೆ ಮಾಡುವ ಮೂಲಕ ಮಾದರಿಯಾಗಿದ್ದಾರೆ.ಮೈಸೂರು ನಗರದ ಸ್ವಚ್ಛತೆಗೆ ಆಧ್ಯತೆ ನೀಡುವಂತೆ ಕರೆ ನೀಡಿದ್ದಾರೆ.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *