“ಹಿರಿಯ ಕಾಂಗ್ರೆಸ್ ಮುಖಂಡ ಬಿ ಕೆ ಪುಟ್ಟಸ್ವಾಮಿ ಅವರ ನಿಧನಕ್ಕೆ ಡಿ ಕೆ ಶಿವಕುಮಾರ್ ಸಂತಾಪ”

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಬಿ ಕೆ ಪುಟ್ಟಸ್ವಾಮಿ ಅವರ ನಿಧನಕ್ಕೆ ಡಿ ಕೆ ಶಿವಕುಮಾರ್ ಸಂತಾಪ.

ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ವಿಜೇತ ಹಿರಿಯ ಕಾಂಗ್ರೆಸ್ ಮುಖಂಡ, ಮಂಡ್ಯ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ ಕೆ ಪುಟ್ಟಸ್ವಾಮಿ ಆವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಳವಳ್ಳಿ ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕರು, ತಾಲೂಕು ಬೋರ್ಡ್ ಮಾಜಿ ಸದಸ್ಯರು, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷರು ಆಗಿದ್ದ ಪುಟ್ಟಸ್ವಾಮಿ ಅವರು ನೇರ ನಡೆ, ನುಡಿಯ ವ್ಯಕ್ತಿತ್ವ ಹೊಂದಿದ್ದರು.

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದರು. ಹಿರಿಯ ಮಾರ್ಗದರ್ಶಕರೂ ಆಗಿದ್ದರು. ಅವರ ನಿಧನ ಅತೀವ ನೋವು ತಂದಿದೆ. ಪಕ್ಷಕ್ಕೆ ನಷ್ಟವಾಗಿದೆ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪುಟ್ಟಸ್ವಾಮಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬಂಧುಗಳು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *