ಚಾಮರಾಜನಗರ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸೆ.30ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸಲಿದ್ದು, ಈ ಹಿನ್ನೆಲೆಯಲ್ಲಿ ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಸಿದ್ದರಾಮಯ್ಯ ಪರಿಶೀಲನೆ ನಡೆಸಿ ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಮಾಜಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಪುಟ್ಟರಂಗ ಶೆಟ್ಟಿ, ಸಂಸದರಾದ ಡಿ.ಕೆ. ಸುರೇಶ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್ ಮತ್ತಿತರರು ಹಾಜರಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.


