“ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾಕುಂಭಮೇಳವು ಮಲೆಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಜ್ಯೋತಿ ಯಾತ್ರೆಗೆ ಸಚಿವರಿಂದ ಚಾಲನೆ”

ಚಾಮರಾಜನಗರ: ಚಾಮರಾಜನಗರ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾಕುಂಭಮೇಳವು ಮಲೆಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಜ್ಯೋತಿ ಯಾತ್ರೆಗೆ ಸಚಿವರಿಂದ ಚಾಲನೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಅಂಬಿಗರ ಹಳ್ಳಿಯಲ್ಲಿ ಸೆಪ್ಟಂಬರ್ 13ರಿಂದ 16 ರವರೆಗೆ ಕುಂಭ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟದಲ್ಲಿ 3ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಾಯಿತು.

ಮಲೈ ಮಹದೇಶ್ವರ ದೇವಾಲಯದ ಆವರಣದಲ್ಲಿ ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಗೋಪಾಲಯ್ಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾಕ್ಟರ್ ಕೆ.ಸಿ. ನಾರಾಯಣಗೌಡ ಅವರು ಮಹದೇಶ್ವರ ಜ್ಯೋತಿ ರಥಯಾತ್ರೆಗೆ ಹಸಿರು ನಿಶಾನೆ ತೋರಿಸಿದರು.

ಮೊದಲಿಗೆ ದೇವರಿಗೆ ಪೂಜೆ ಸಲ್ಲಿಸಲಾಯಿತು 3ರಥಗಳಿಗೆ ಪೂಜೆ ನೆರವೇರಿಸಿದ ಬಳಿಕ ರಥ ಯಾತ್ರೆಗೆ ವಿದ್ಯುಕ್ತ ವಾಗಿ ಸಚಿವರು ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಟ್ರ್ಯಾಕ್ಟರ್ ಕೆ. ಸಿ. ನಾರಾಯಣಗೌಡ ಅವರು ಕೆ. ಆರ್. ಪೇಟೆಯ ಅಂಬಿಗರ ಹಳ್ಳಿಯಲ್ಲಿ ಅಕ್ಟೋಬರ್ 13ರಿಂದ 16 ರವರೆಗೆ ನಡೆಯಲಿರುವ ಕುಂಭಮೇಳಕ್ಕೆ 6ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಲಕ್ಷ್ಮಣತೀರ್ಥ. ಹೇಮಾವತಿ. ಕಾವೇರಿ. 3ನದಿಗಳು ಸೇರುವ ತ್ರಿವೇಣಿ ಸಂಗಮಕ್ಕೆ ಮಹದೇಶ್ವರರು ಬಂದು ಹೋಗಿದ್ದರು ಎಂದು ಹಿರಿಯರು ಹೇಳುತ್ತಾರೆ. ಈ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕೆ ಹೆಚ್ಚಿನ ಜನರು ಆಗಮಿಸಬೇಕಾಗಿ ಕೆ. ಸಿ. ನಾರಾಯಣಗೌಡ ತಿಳಿಸಿದರು.

ಅಬಕಾರಿ ಹಾಗೂ ಮಂಡ್ಯ ಜಿಲ್ಲೆಯ ಸಚಿವರಾದ ಗೋಪಾಲಯ್ಯ ರವರು ಮಾತನಾಡಿ ಕೆ .ಆರ್ .ಪೇಟೆ ತಾಲ್ಲೂಕಿನ ಅಂಬಿಗರ ಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13ರಿಂದ16 ರವರೆಗೆ ಮಹಾ ಕುಂಭ ಮೇಳ ಕಾರ್ಯಕ್ರಮಕ್ಕೆ ಡಾಕ್ಟರ್ ನಿರ್ಮಾಲಾನಂದ ಮಹಾಸ್ವಾಮಿಗಳು. ಸುತ್ತೂರು ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ನೇತೃತ್ವದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಕೆ. ಆರ್. ಪೇಟೆ ತಾಲೂಕಿನ ಕಾವೇರಿ .ಹೇಮಾವತಿ. ಲಕ್ಷ್ಮಣತೀರ್ಥ. ನದಿಗಳು ಸೇರುವ ತ್ರಿವೇಣಿ ಸಂಗಮಕ್ಕೆ ಶ್ರೀಮಲೈಮಹದೇಶ್ವರಸ್ವಾಮಿ ಬಂದು ಹೋಗಿರುವುದು ಎಲ್ಲರಿಗೂ ತಿಳಿದಿದೆ ಆದ್ದರಿಂದ ಈ ಪುಣ್ಯಭೂಮಿಯಲ್ಲಿ ಕುಂಭಮೇಳ ಆಚರಣೆ ಮಾಡುತ್ತೇವೆ ಎಂದು ತಿಳಿಸಿದರು.

ಮಹಾ ಕುಂಭ ಮೇಳ ಕಾರ್ಯಕ್ರಮದಲ್ಲಿ ಸಾಧು ಸಂತರು .ಸ್ವಾಮೀಜಿಗಳು. ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ. ಉತ್ತರಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಇನ್ನಿತರ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬರುವಂತಹ ಭಕ್ತಾದಿಗಳಿಗೆ ಊಟೋಪಚಾರದ ವ್ಯವಸ್ಥೆ ಹಾಗೂ ಮೂಲ ಸೌಲಭ್ಯಗಳನ್ನು ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಮೈಸೂರು ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಿಗೆ ಸಂಚರಿಸುವ 3ಜ್ಯೋತಿ ರಥಗಳಿಗೆ ಎಂದು ಶ್ರೀ ಮಲೈ ಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಲಾಗಿದೆ. ಸೋದರತೆಗಳ 3ಜಿಲ್ಲೆಗಳಲ್ಲಿ ಸಂಚರಿಸಿ ಗ್ರಾಮದ ದೇವಸ್ಥಾನ ಮಠ ಹಾಗೂ ಜನತೆ ಕುಂಭಮೇಳ ಕಾರ್ಯಕ್ರಮದ ಬಗ್ಗೆ ತಿಳಿಸುವಂತಹ ಕೆಲಸವನ್ನು ಮಾಡುತ್ತದೆ.
ಈ ಕಾರ್ಯಕ್ರಮಕ್ಕೆ ಸಂಚರಿಸುತ್ತಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.

ಹನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್. ನರೇಂದ್ರ ಅವರು ಮಾತನಾಡಿ ಕುಂಭಮೇಳದ ಅಂಗವಾಗಿ ನಡೆಯುತ್ತಿರುವ ಜ್ಯೋತಿ ಯಾತ್ರೆ ಯಶಸ್ವಿಯಾಗಲಿ ಮಹದೇಶ್ವರರ ಶುರುವಾದ ಎಲ್ಲರ ಮೇಲಿರಲಿ ಎಂದರು.

ಕಾರ್ಯಕ್ರಮದಲ್ಲಿ ಸಾಲೂರು ಮಠದ ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ. ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು. ಮಂಡ್ಯ ಜಿಲ್ಲಾಧಿಕಾರಿ ಎಸ್ .ಸರಸ್ವತಿ. ಚಾಮರಾಜನಗರ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಯಸ್ ಕಾತ್ಯಾಯಿನಿದೇವಿ. ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತಾ ಎಲ್. ಹುಲ್ಮನಿ . ಹೆಚ್ಚುವರಿ ಜಿಲ್ಲಾಧಿಕಾರಿ ಡಾಕ್ಟರ್. ಹೆಚ್. ಎಲ್ .ನಾಗರಾಜು ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ. ಹನೂರು ತಹಸೀಲ್ದಾರ್ ಆನಂದಯ್ಯ. ಮಂಡ್ಯ ಜಿಲ್ಲೆಯ ತಹಸೀಲ್ದಾರ್ ರೂಪಾ .ಸಣ್ಣಸ್ವಾಮಿಗೌಡ ಇನ್ನಿತರರು ಉಪಸ್ಥಿತರಿದ್ದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555

Leave a Reply

Your email address will not be published. Required fields are marked *