“ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ವಿಧಿವಶರಾಗಿದ್ದಾರೆ”

ಲಕ್ಕೋ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ವಿಧಿವಶರಾಗಿದ್ದಾರೆ.

ಅನಾರೋಗ್ಯಕ್ಕೆ ಒಳಗಾದ ಉತ್ತರಾಧಿಕಾರಿ ಮುಲಾಯಂ ಯಾದವ್ ನಿಧನರಾಗಿದ್ದಾರೆ ಎಂದು ಅವರ ಪುತ್ರ ಪ್ರದೇಶದ ಮಾಜಿ ಸಿಎಂ ಖಿಲೇಶ್ ಯಾದವ್ ಖಚಿತಪಡಿಸಿದ್ದಾರೆ. ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮ್ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಟೋಬರ್ 2 ರಂದು ತೀವ್ರ ಅನಾರೋಗ್ಯದ ಕಾರಣ ಮುಲಾಯಂ ಸಿಂಗ್ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಯಿತು. ಆಗಸ್ಟ್ 22 ರಿಂದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಭಾನುವಾರ ಐಸಿಯುಗೆ ಸ್ಥಳಾಂತರಿಸಲಾಯಿತು. ಆದರೆ ಕಳೆದ 8 ದಿನಗಳಿಂದ ಮುಲಾಯಂ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಲಿಲ್ಲ.

ಮೇದಾಂತ ಆಸ್ಪತ್ರೆ ಗುರುವಾರ ಹೊರಡಿಸಿದ ಬುಲೆಟಿನ್‌ನಲ್ಲಿ, ಮುಲಾಯಂ ಸಿಂಗ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮುಲಾಯಂ ಸಿಂಗ್ ಯಾದವ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *