ಹಿರಿಯ ರಾಜಕಾರಣಿ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಸಂತಾಪ.

ಹಿರಿಯ ರಾಜಕಾರಣಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೂರು ಬಾರಿ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಯಾದವ್ ಅವರು ಲೋಕನಾಯಕ ಜಯಪ್ರಕಾಶ್ ಮತ್ತು ಡಾ. ಲೋಹಿಯಾ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಷ್ಟ್ರ ರಾಜಕಾರಣದಲ್ಲಿ ಮುನ್ನೆಲೆಗೆ ಬಂದವರು.
ಮುಲಾಯಂ ಸಿಂಗ್ ಅವರ ನಿಧನದಿಂದ ಮುತ್ಸುದ್ದಿ ರಾಜಕಾರಣಿಯನ್ನು ಈ ದೇಶ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಸಚಿವರು ತಿಳಿಸಿದ್ದಾರೆ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.



