ಬೆಂಗಳೂರು:ಸಾರಾ ಅಬೂಬಕ್ಕರ್ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ
ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕರ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
‘ಲೇಖಕಿ ಸಾರಾ ಅಬೂಬಕರ್ ಅವರ ನಿಧನ ಸುದ್ದಿ ಕೇಳಿ ಬೇಸರವಾಗಿದೆ. ತಮ್ಮ ಸಮಾಜಮುಖಿ ಬರವಣಿಗೆಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅವರ ಸೇವೆ ಅಪಾರದದ್ದು.
ಅಬೂಬಕರ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ’ ಎಂದು ತಮ್ಮ ಶೋಕ ಸಂದೇಶದಲ್ಲಿ ಶಿವಕುಮಾರ್ ಅವರು ಹೇಳಿದ್ದಾರೆ.
ವರದಿ: ನಂದಿನಿ ಮೈಸೂರು



