2023-24ನೇ ಸಾಲಿನ ರಾಜ್ಯ ಬಜೆಟ್‌: ಸಿದ್ಧತೆ ಆರಂಭಿಸಿದ ಸಿಎಂ ಬೊಮ್ಮಾಯಿ

ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌: ಸಿದ್ಧತೆ ಆರಂಭಿಸಿದ ಸಿಎಂ ಬೊಮ್ಮಾಯಿ

ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಬಜೆಟ್‌ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಭೇಟಿ ನೀಡಿದ ಮರುದಿನನೇ ಅಂದರೆ ಜನವರಿ 20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗಲೇ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಲು ಮುಂದಾಗಿದ್ದು, ಇದು ಪ್ರಸ್ತುತ ಸರ್ಕಾರ ಕೊನೆಯ ಬಜೆಟ್ ಆಗಿರಲಿದೆ. ಹೀಗಾಗಿ ಮತದಾರರನ್ನು ಓಲೈಸಲು ಮುಖ್ಯಮಂತ್ರಿಗಳು ಹಲವು ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.

ವರದಿ: ಸಿಂಚನ ಕೆ

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :-ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *