ಅಪಘಾತದ ಬಳಿಕ ರಿಷಭ್ ಪಂತ್ ಮೊದಲ ಟ್ವೀಟ್: ‘ಚೇತರಿಸುತ್ತಿದ್ದೇನೆ, ಎಲ್ಲಾ ಸವಾಲುಗಳಿಗೆ ಸಿದ್ಧ’

ಮುಂಬೈ : ಅಪಘಾತದ ಬಳಿಕ ರಿಷಭ್ ಪಂತ್ ಮೊದಲ ಟ್ವೀಟ್: ‘ಚೇತರಿಸುತ್ತಿದ್ದೇನೆ, ಎಲ್ಲಾ ಸವಾಲುಗಳಿಗೆ ಸಿದ್ಧ’

ಜ 17 ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿರುವ ರಿಷಭ್ ಪಂತ್ ರವರು ಅಪಘಾತದ ಬಳಿಕ ಮೊದಲ ಬಾರಿ ಟ್ವೀಟ್ ಮಾಡಿದ್ದು ‘ಚೇತರಿಸಿಕೊಳ್ಳುತ್ತಿದ್ದೇನೆ ಹಾಗೂ ಮುಂದಿನ ಸವಾಲುಗಳಿಗೆ ಸಿದ್ದನಾಗಿದ್ದೇನೆ. ಎಲ್ಲರ ಬೆಂಬಲ ಶುಭ ಹಾರೈಕೆಗಳಿಂದ ಸಂತಸಗೊಂಡಿದ್ದೇನೆ. ಅಪಘಾತದ ಕ್ಷಣದಿಂದಲೂ ಅದ್ಭುತ ವಾಗಿ ಬೆಂಬಲಿಸುತ್ತಿರುವ ಬಿಸಿಸಿಐ ಸರ್ಕಾರಕ್ಕೆ ವಂದನೆಗಳು. ವೈದ್ಯರು, ಸಹ ಆಟಗಾರರು ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲು ನನ್ನಲ್ಲಿ ಪದಗಳಿಲ್ಲ. ಶೀಘ್ರವೇ ಮೈದಾನದಲ್ಲಿ ನಿಮ್ಮನ್ನೆಲ್ಲ ಭೇಟಿಯಾಗಲು ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ. ಹಾಗೂ ಅಪಘಾತದ ಬಳಿಕ ಆಸ್ಪತ್ರೆಗೆ ಸಾಗಿಸಲು ತಮಗೆ ನೆರವಾದ ರಜತ್ ಕುಮಾರ್, ನಿಶು ಕುಮಾರ್ ಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದು ಅವರ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಪ್ರಾಣಪಾಯದಿಂದ ಪಾರಾಗಿರುವ ರಿಷಬ್ ಪಂತ್ ಅವರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರು ವಾರಗಳ ಬಳಿಕ ಮತ್ತೊಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದ್ದು ಪಂತ್ ಕ್ರಿಕೆಟಿಗೆ ಮರಳಲು ಕನಿಷ್ಠ 18 ತಿಂಗಳು ಅಂದರೆ ಒಂದುವರೆ ವರ್ಷವಾಗಲಿದೆ ಎನ್ನಲಾಗಿದೆ. ಈ ವರ್ಷದ ಐಪಿಎಲ್ ಏಕದಿನ ವಿಶ್ವಕಪ್ ಮಾತ್ರವಲ್ಲದೆ, 2024ರ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಗೈರು ಹಾಜರಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.
ರಿಷಬ್ ಪಂತ್ 16ನೇ ಆವೃತ್ತಿಯ ಐಪಿಎಲ್ ಗೆ ಸಂಪೂರ್ಣ ಗೈರಾದರು ಅವರ 16 ಕೋಟಿ ರೂಪಾಯಿ ವೇತನ ಪೂರ್ತಿ ಸಿಗಲಿದೆ. ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿರುವ ಎಲ್ಲಾ ಆಟಗಾರರು ವಿಮೆ ವ್ಯಾಪ್ತಿಗೆ ಒಳಪಟ್ಟಿದ್ದು ಗಾಯದ ಕಾರಣದಿಂದ ಐಪಿಎಲ್ ಗೆ ಗೈರಾದರು ಅವರಿಗೆ ಪ್ರಾಂಚೈಸಿ ಘೋಷಿಸಿರುವ ಪೂರ್ತಿ ವೇತನ ಸಿಗಲಿದ್ದು ವಿಮಾ ಕಂಪನಿಯೇ ಆಟಗಾರನಿಗೆ ಪಾವತಿಸಲಿದೆ. ಜೊತೆಗೆ ಬಿಸಿಸಿಐ ಕೇಂದ್ರ ಗುತ್ತಿಗೆಯ 5 ಕೋಟಿ ರೂಪಾಯಿ ಮೊತ್ತವು ಖಾತೆಗೆ ಜಮೆಯಾಗಲಿದೆ ಹಾಗೂ ಪಂತ್ ರವರ ಚಿಕಿತ್ಸೆಯ ಸಂಪೂರ್ಣ ವೆಚ್ಚವು ಬಿಸಿಸಿಐ ಕೇಂದ್ರ ಗುತ್ತಿಗೆ ಭರಿಸುವುದಾಗಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *