ಕೋಳಿಗಳನ್ನು ಬಂಧಿಸಿದ ಪೊಲೀಸ್

ಕೊಪ್ಪಳ : ಕೋಳಿಗಳನ್ನು ಬಂಧಿಸಿದ ಪೊಲೀಸ್.

ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿ ಅಲ್ಲಿದ್ದ ಕೋಳಿಗಳನ್ನು ಬಂಧಿಸಿದ ವಿಚಿತ್ರ ಘಟನೆ ಕೊಪ್ಪಳದಲ್ಲಿ ನಡೆದಿದೆ.
ತಾಲೂಕಿನ ಪನ್ನಾಪುರ ಹತ್ತಿರದ ಬಸವಣ್ಣ ಕ್ಯಾಂಪ್ ನಲ್ಲಿ ಸಂಕ್ರಮಣ ನಿಮಿತ್ತ ಕೋಳಿ ಕಾಳಗ ನಡೆದಿತ್ತು. ಮಂಗಳವಾರ ಸಂಜೆ ಜೂಜು ಅಡ್ಡೆ ಮೇಲೆ ದಾಳಿ ಮಾಡಿರುವ ಪೊಲೀಸರು ಹುಂಜಗಳನ್ನು ಹಾಗೂ ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ಸಿಕ್ಕಿರುವ ಹುಂಜಗಳನ್ನು ಕರೆತಂದಿರುವ ಪೊಲೀಸರು ಸೆಲ್ ನಲ್ಲಿ ಇಟ್ಟಿದ್ದಾರೆ.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *