ದಂಡ ಕಟ್ಟುವವರಿಗೆ ಶೇಕಡಾ 50ರಷ್ಟು ರಿಯಾಯಿತಿ ಘೋಷಿಸಿದ ಸಾರಿಗೆ ಇಲಾಖೆ; ಅಂತಿಮ ದಿನಾಂಕ ಇಲ್ಲಿದೆ

ಬೆಂಗಳೂರು : ದಂಡ ಕಟ್ಟುವವರಿಗೆ ಶೇಕಡಾ 50ರಷ್ಟು ರಿಯಾಯಿತಿ ಘೋಷಿಸಿದ ಸಾರಿಗೆ ಇಲಾಖೆ; ಅಂತಿಮ ದಿನಾಂಕ ಇಲ್ಲಿದೆ.

ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟಲು ಬಾಕಿ ಇರುವವರು ಮತ್ತು ಪ್ರಕರಣ ಕೋರ್ಟ್​ನಲ್ಲಿ ಇದ್ದರೆ ಅಂತಹವರಿಗೆ ಸಾರಿಗೆ ಇಲಾಖೆ ಶೇಕಡಾ 50ರಷ್ಟು ರಿಯಾಯಿತಿ ನೀಡಿದೆ.
ಫೆಬ್ರವರಿ 11ರ ಒಳಗಾಗಿ ದಂಡ ಕಟ್ಟುವವರಿಗೆ ಶೇಕಡಾ 50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಫೆ.11 ರ ಒಳಗಾಗಿ ಫೈನ್ ಕಟ್ಟುವವರು ಕಟ್ಟಬಹುದಾಗಿದೆ. ಫೆಬ್ರವರಿ 11ರ ನಂತರ ಸಂಪೂರ್ಣ ದಂಡದ ಮೊತ್ತ ಪಾವತಿಸಬೇಕು.
ಫೆಬ್ರವರಿ 11ರಂದು ಲೋಕ ಅದಾಲತ್ ನಡೆಯಲಿರುವ ಹಿನ್ನಲೆ ದಂಡ ಪಾವತಿಯಲ್ಲಿ ರಿಯಾಯಿತಿ ನೀಡುವಂತೆ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ವೀರಪ್ಪ ಅವರು ಮನವಿ ಮಾಡಿದ್ದರು.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *