ನಂಜನಗೂಡು ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ.

ಮೈಸೂರು: ನಂಜನಗೂಡು ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ, ಡಾ.ಎಚ್.ಸಿ.ಮಹದೇವಪ್ಪ.

ಮೈಸೂರು: ನಂಜನಗೂಡು ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ. ದಿ. ಧ್ರುವನಾರಾಯಣ್ ಅವರ ಪುತ್ರ ದರ್ಶನ್’ಗೆ ನಾನು ಬೆಂಬಲ ನೀಡುತ್ತೇನೆ ಎಂದು ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಪ್ರಕಟಿಸಿದ್ದು, ಈ ಮೂಲಕ ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತ್ಯಾಗ ಮಾಡಿದ್ದಾರೆ. ಧ್ರುವನಾರಾಯಣ್ ಹಠಾತ್ ನಿಧನರಾದಾಗಲೇ ನಾನು ಈ ನಿರ್ಧಾರ ಮಾಡಿದ್ದೆ. ಅದನ್ನು ಈಗ ನನ್ನ ಮಗ ಸುನೀಲ್ ಬೋಸ್ ಹಾಗೂ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಸಮ್ಮುಖದಲ್ಲಿ ಬಹಿರಂಗಪಡಿಸಿದ್ದೇನೆ ಎಂದು ಮೈಸೂರಿನ ವಿಜಯನಗರದಲ್ಲಿರುವ ಆರ್. ಧ್ರುವನಾರಾಯಣ್ ಅವರ ನಿವಾಸಕ್ಕೆ ತಮ್ಮ ಪುತ್ರ ಸುನೀಲ್ ಬೋಸ್ ಜತೆ ಭೇಟಿ ನೀಡಿ ಧ್ರುವನಾರಾಯಣ್ ಪುತ್ರ ದರ್ಶನ್’ಗೆ ಸಾಂತ್ವನ ಹೇಳಿದ ಬಳಿಕ ಪ್ರಕಟಿಸಿದರು. ನಾನು ನಂಜನಗೂಡು ಅಭ್ಯರ್ಥಿಯಾಗಲು ಬಯಸುವುದಿಲ್ಲ. ನಾನು ಸಾವಿನಲ್ಲಿ, ಸಮಾಧಿಯ ಮೇಲೆ ರಾಜಕೀಯ ಮಾಡುವುದಿಲ್ಲ ಎಂದು ಮಹದೇವಪ್ಪ ಸ್ಪಷ್ಟಪಡಿಸಿದರು.

-ನಂದಿನಿ ಮೈಸೂರು

Leave a Reply

Your email address will not be published. Required fields are marked *