ಮೈಸೂರು: ಪಂಚರತ್ನ ಯಾತ್ರೆ ಸಮಾರೋಪದಲ್ಲಿ ಹೆಚ್.ಡಿ.ದೇವೇಗೌಡ ಭಾಷಣ: ಕಣ್ಣೀರು ಹಾಕಿದ ಕುಮಾರಸ್ವಾಮಿ, ರೇವಣ್ಣ.

ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಜೆಡಿಎಸ್ ಪಂಚರತ್ನ ಯಾತ್ರೆ (Pancharatna Yatra) ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ರೈತಗೀತೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ದೇವರ ಶಕ್ತಿ, ಕಾರ್ಯಕರ್ತ ಶ್ರಮದಿಂದ ಈ ಬಾರಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ನಾನು ಒಬ್ಬ ರೈತನ ಮಗ. ನೀವು ರೈತರ ಮಕ್ಕಳು. ಬಣ್ಣದ ನಾಟಕದ ಮಾತುಗಳಿಂದ ಯಾವುದೇ ಅಧಿಕಾರಕ್ಕೆ ಬಂದವರಲ್ಲ ಎಂದು ಹೇಳಿದರು. ಹೆಚ್.ಡಿ.ದೇವೇಗೌಡರು ಲಿಖಿತ ಭಾಷಣ ಓದುತ್ತಿದ್ದರೆ, ಇತ್ತ ಕಡೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಚಿವ H.D.ರೇವಣ್ಣ ಭಾವುಕರಾಗಿ ಕಣ್ಣೀರು ಹಾಕಿದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655.



