ಅಹಿಂಸಾ ಮಾರ್ಗ ತೋರಿದ ಮಹಾವೀರ-ಕೇಂದ್ರ ಪ್ರಾಣಿಗಳ ಕಲ್ಯಾಣ ಮಂಡಳಿಯ ರಾಜ್ಯ ಅಧ್ಯಕ್ಷ ಮಿತ್ತಲ್

ಮೈಸೂರು: ಅಹಿಂಸಾ ಮಾರ್ಗ ತೋರಿದ ಮಹಾವೀರ-ಕೇಂದ್ರ ಪ್ರಾಣಿಗಳ ಕಲ್ಯಾಣ ಮಂಡಳಿಯ ರಾಜ್ಯ ಅಧ್ಯಕ್ಷ ಮಿತ್ತಲ್

ಮೈಸೂರು ನಗರದ ಚಾಮುಂಡಿ ಬೆಟ್ಟದ ಪಾದದಲ್ಲಿ ಪಕ್ಷಿ ಪ್ರಾಣಿಗಳಿಗೆ ನೀರಿನ ತೊಟ್ಟಿ ಅಳವಡಿಸುವ ಮೂಲಕ
ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಆಚರಿಸಲಾಯಿತು ಆನಂತರ ಮಂಗಗಳಿಗೆ ಬಾಳೆಹಣ್ಣು ವಿಚಾರಿಸಲಾಯಿತು. ‘ಜೈನ ಧರ್ಮದ ಕೊನೆಯ ತೀರ್ಥ೦ಕರರಾಗಿದ್ದ ಭಗವಾನ್ ಮಹಾವೀರರು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ತೋರಿಸಿದರು’ ಎಂದು ಕೇಂದ್ರ ಪ್ರಾಣಿಗಳ ಕಲ್ಯಾಣ ಮಂಡಳಿಯ ರಾಜ್ಯ ಅಧ್ಯಕ್ಷ ಮಿತ್ತಲ್ ಹೇಳಿದರು.

ಮಹಾವೀರ ಜಯಂತಿ ಅಂಗವಾಗಿ ಏರ್ಪಡಿಸಿದ್ದ, ‘ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮನುಷ್ಯ ಹುಟ್ಟಿನಿಂದಲೇ ಶ್ರೇಷ್ಠನಾಗುವುದಿಲ್ಲ. ಸತ್ಯದ ಹಾದಿಯಲ್ಲಿ, ದಾರ್ಶನಿಕರ ತತ್ವ–ಸಿದ್ಧಾಂತಗಳನ್ನು ನಂಬಿ ನಡೆದಾಗ ಮನುಷ್ಯನ ಜೀವನ ಶ್ರೇಷ್ಠವಾಗುವುದು’ ಎಂದು ಅಭಿಪ್ರಾಯಪಟ್ಟರು. ಬಿಸಲಿನ ಬೇಗೆಯಿಂದ ಎಲ್ಲ ಜೀವಿಗಳು ತತ್ತರಿಸುತ್ತಿವೆ. ಮನುಷ್ಯರಷ್ಟೇ ಅಲ್ಲ, ಪ್ರಾಣಿ ಪಕ್ಷಿಗಳು ನೀರು, ಆಹಾರಕ್ಕಾಗಿ ಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣಿ, ಪಕ್ಷಿಗಳ ಸಂಕಷ್ಟ ಅರಿತು ಮಹಾವೀರ ಜಯಂತಿ ಅಂಗವಾಗಿ ನೀರಿನ ತೊಟ್ಟಿ ಅಳವಡಿಸಲು ಮುಂದಾಗಿದ್ದಾರೆ. ಮನುಷ್ಯನ ಜೀವ ಎಷ್ಟು ಮುಖ್ಯವೋ ಪ್ರಾಣಿ, ಪಕ್ಷಿಗಳ ಜೀವ ಕೂಡ ಅಷ್ಟೇ ಮುಖ್ಯ.

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಜಲಮೂಲಗಳು ಬತ್ತುತ್ತಿವೆ. ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ನೀರಿಗಾಗಿ ಮೈಲುಗಟ್ಟಲೆ ಅಲೆಯಬೇಕಾಗಿದೆ. ಇದು ಸಣ್ಣ ಪಕ್ಷಿ, ಪ್ರಾಣಿಗಳ ಬದುಕಿಗೆ ಮಾರಕವಾಗಿದೆ. ನೀರು ಮತ್ತು ಆಹಾರ ಇಲ್ಲದೆ ಪಕ್ಷಿಗಳು ಜೀವ ಕಳೆದುಕೊಳ್ಳುವ ಭೀತಿ ಕಾಡುತ್ತಿದೆ. ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕಲ್ಯಾಣ ಮಂಡಳಿಯ ರಾಜ್ಯ ಅಧ್ಯಕ್ಷ ಎಸ್ ಕೆ ಮಿತ್ತಲ್, ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಪೃಥ್ವಿ ಸಿಂಗ್ ಚಂದಾವತ, ಜೈ ಭೀಮ್ ಜನಸ್ಪಂದನ ವೇದಿಕೆ ಅಧ್ಯಕ್ಷ ಚೇತನ್ ಕಾಂತರಾಜು, ರಾಕೇಶ್, ಸಚಿಂದ್ರ, ಹಾಗೂ ಇನ್ನಿತರರು ಭಾಗವಹಿಸಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *