ಮೈಸೂರು ದಸರಾದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಸಾವನ್ನಪ್ಪಿದ್ದಾನೆ

ಒಂಟಿ ಸಲಗದ ದಾಳಿಗೆ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಸಾವನ್ನಪ್ಪಿದ್ದಾನೆ.
ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಕಾಕನಕೋಟೆಯಲ್ಲಿ 1968ರಲ್ಲಿ ಖೆಡ್ಡಾಗೆ ಅರ್ಜುನ(64) ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೆಡವಿ ಸೆರೆ ಹಿಡಿದಿದ್ದರು.ಅದನ್ನ ಪಳಗಿಸಿದ ನಂತ್ರ, ಬಳ್ಳೆ ಆನೆ ಶಿಬಿರದಲ್ಲಿ

ಇರಿಸಲಾಗಿತ್ತು.ಇಂತಹ ಅರ್ಜುನ ಆನೆ ಸತತ 8 ಬಾರಿ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತು ಬೇಷ್ ಎನಿಸಿಕೊಂಡಿತ್ತು.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ
ವರದಿ :ನಂದಿನಿ ಮೈಸೂರು

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ : 9880432555 ,off: 08183226655

