ಆಶಾಢ ಮಾಸ ಆರಂಭವಾಗುತ್ತಿದ್ದಂತೆ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯ ಜರುಗಲಿದೆ.
ನಾಲ್ಕು ಆಶಾಢ ಶುಕ್ರವಾರವೂ ಕೂಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ
ನಾಡ ಅಧಿದೇವತೆ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿ ಭಕ್ತರ ಗಮನ ಸೆಳೆಯಲಿದ್ದಾಳೆ.
ವರ್ಷದಿಂದ ವರ್ಷಕ್ಕೆ ಆಷಾಢಕ್ಕೆ ಆಗಮಿಸುವ ಭಕ್ತರು ಹಾಗೂ ಗಣ್ಯರ ಸಂಖ್ಯೆಯೂ ಹೆಚ್ಚಳವಾಗಲಾರಂಭಿಸಿರುವುದು ಆಷಾಢ ಸಂಭ್ರಮವನ್ನು ಹಿಮ್ಮಡಿಗೊಳಿಸಿದೆ.
ಜೂನ್ 23, 30- ಜುಲೈ7, 14ರ ನಾಲ್ಕು ಆಷಾಢ ಶುಕ್ರವಾರಗಳು ಹಾಗೂ ಜುಲೈ10ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ ಜರುಗಲಿದೆ.
ಕಳೆದ ಬಾರಿಗಿಂತಲೂ ಈ ಬಾರಿ ಅದ್ಧೂರಿ ಆಷಾಢ ಮಾಸಕ್ಕೆ ಸಿದ್ಧತೆ ನಡೆದಿದೆ. ಏಕೆಂದರೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಹಾಗೂ ಮೈಸೂರು ಜಿಲ್ಲೆಯವರೇ ಮುಖ್ಯಮಂತ್ರಿ ಆಗಿರುವ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿ ಆಷಾಢ ಆಚರಣೆಗೆ ಸಿದ್ದತೆ ನಡೆಯಲಿದೆ.
ಹೊರ ರಾಜ್ಯದ ಭಕ್ತರು: ಆಷಾಢದಲ್ಲಿ ಶ್ರೀ ಚಾಮುಂಡೇಶ್ವರಿಯ ದರ್ಶನಕ್ಕೆ ರಾಜ್ಯ ಅಲ್ಲದೇ ವಿದೇಶದಿಂದಲೂ ಭಕ್ತರು ಆಗಮಿಸಲಿದ್ದಾರೆ. ಅದರಲ್ಲೂ ತಮಿಳುನಾಡು, ಕೇರಳ, ಆಂಧ್ರ ಹಾಗೂ ಮಹಾರಾಷ್ಟ್ರ ಭಾಗದಿಂದಲೂ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸುವುದು ವಿಶೇಷ. ಈ ಹಿಂದೆ ತಮಿಳುನಾಡು ಸಿಎಂ ಆಗಿದ್ದ ಜಯಲಲಿತಾ ಸಹ ಚಾಮುಂಡೇಶ್ವರಿಯ ಪರಮ ಭಕ್ತೆಯಾಗಿದ್ದರು. ಮಾತ್ರವಲ್ಲದೆ, ಪ್ರತಿ ವರ್ಷ ಆಷಾಢದಲ್ಲಿ ಆಗಮಿಸಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದರು. ಅಂತೆಯೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ನಟ ದರ್ಶನ್ ಅವರು ಚಾಮುಂಡೇಶ್ವರಿಯ ದರ್ಶನಕ್ಕೆ ಆಗಮಿಸಿದರೆ, ಕೇಂದ್ರ ಸಚಿವೆಯಾದ ಶೋಭಾ ಕರಂದ್ಲಾಜೆ ಮೆಟ್ಟಿಲು ಹತ್ತಿ ಪ್ರತಿ ವರ್ಷ ಹರಕೆ ತೀರಿಸುವುದು ಅವರ ವಿಶೇಷತೆಯಾಗಿದೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

