ಬೆಂಗಳೂರು: ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ.

ನಾವು ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅದು ಯಾರನ್ನು ಜೋಡಿಸುತ್ತಿದೆ. ಯಾರನ್ನು ಜೋಡೋ ಮಾಡುತ್ತಿದೆ ಎಂದು ಜಗತ್ತಿಗೆ ಗೊತ್ತಿದೆ. ನಾವು ನಮ್ಮ ಕಾರ್ಯಕ್ರಮದ ಮೂಲಕ ಜನರ ಬಳಿ ಹೋಗುತ್ತಿದ್ದೇವೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ
ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ನಿರಂತರವಾಗಿ ಕಾರ್ಯಕ್ರಮ ಮಾಡಿಕೊಂಡು ಬಂದಿದೆ. ಈಗ ಜನಸಂಕಲ್ಪ ಯಾತ್ರೆ ಪ್ರಾರಂಭ ಮಾಡುತ್ತಿದ್ದೇವೆ. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಯಾತ್ರೆ ಪ್ರಾರಂಭವಾಗಲಿದೆ.
ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಚುನಾವಣೆಗೆ ಸಜ್ಜಾಗಿ, ಮತ್ತೊಮ್ಮೆ ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ಕಾರ್ಯಕ್ರಮ ಮಾಡಲಿದ್ದೇವೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಕಾರ್ಯಕ್ರಮ, ಕೆಲಸಗಳು, ನೀತಿಗಳು ಮತ್ತು ಕೇಂದ್ರದ ಕಾರ್ಯಕ್ರಮಗಳು, ಒಂದೊಂದು ಕ್ಷೇತ್ರದಲ್ಲಿ ಸಾವಿರಾರು ಜನಕ್ಕೆ ಅನುಕೂಲವಾಗಿದೆ.ಅದನ್ನು ಜನರಿಗೆ ಹೇಳಿ ಮುಂದಿನ ದಿನ ಯಾವ ವರ್ಗಕ್ಕೆ ಕಾರ್ಯಕ್ರಮ ಮಾಡಲಿದ್ದೇವೆ. ಯಾವ ರೀತಿ ಲಾಭ ತೆಗೆದುಕೊಳ್ಳಬೇಕು ಎಂದು ಹೀಗೆ ಹತ್ತು ಹಲವು ವಿಷಯ ಜನರಿಗೆ ತಿಳಿಸಲಿದ್ದೇವೆ.
ಜನಸಂಕಲ್ಪ ಯಾತ್ರೆಯ ಪ್ರವಾಸದಲ್ಲಿ ಸಭೆಗಳು, ಸಮಾರಂಭಗಳು, ಫಲಾನುಭವಿಗಳ ಭೇಟಿ, ಕಾರ್ಯಕರ್ತರ ನಿವಾಸಗಳಿಗೆ ಭೇಟಿ ಇರಲಿದೆ. ಇದೆಲ್ಲವನ್ನೂ ಆಯಾ ಕ್ಷೇತ್ರದಲ್ಲಿ ಸ್ಥಳೀಯವಾಗಿ ಅಲ್ಲಿನ ನಾಯಕರು ಯಾವ ರೀತಿ ಕಾರ್ಯಕ್ರಮ ರೂಪಿಸುತ್ತಾರೋ ಅದರಲ್ಲಿ ನಾವು ತೆರಳಲಿದ್ದೇವೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಮಾಹಿತಿಯನ್ನು ಜನರಿಗೆ ನೀಡಲು ಜನಸಂಕಲ್ಪ ಯಾತ್ರೆ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.


