“ಕ್ಯಾಂಟರ್ ಡಿಕ್ಕಿ ಮೂವರು ಸಾವು, ಐದು ಕಾರುಗಳು ಜಖಂ”

ಬೆಂಗಳೂರು: ಕ್ಯಾಂಟರ್ ಡಿಕ್ಕಿ ಮೂವರು ಸಾವು, ಐದು ಕಾರುಗಳು ಜಖಂ.

ಚಿಕ್ಕಬಳ್ಳಾಪುರದ ರಾಮದೇವರ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ರಸ್ತೆ ಪಕ್ಕ ನಿಂತಿದ್ದ ಬೈಕ್, ಕಾರುಗಳಿಗೆ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದು ರಾಮದೇವರಗುಡಿಯ ಪ್ರಣವ್ ಹೋಟೆಲ್ ಗೆ ನುಗ್ಗಿದೆ. ಹೆದ್ದಾರಿಯಿಂದ ಹೋಟೆಲ್ ಗೆ ಕ್ಯಾಂಟರ್ ನುಗ್ಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಹೋಟೆಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ದನ ಮೃತಪಟ್ಟಿದ್ದಾರೆ. ಅಲ್ಲದೆ ಬಾಣಂತಿಗೆ ಗಂಭೀರ ಗಾಯಗಳಾಗಿದ್ದು, ಗರ್ಭದಲ್ಲಿದ್ದ ಮಗು ಮೃತಪಟ್ಟಿದೆ. ಬಾಣಂತಿಯ ಮತ್ತೊಂದು ಮಗು ಅದೃಷ್ಟವಶಾತ್ ಪಾರಾಗಿದೆ.

ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಡ್ಡ ಬಂದ ಕಾರು ತಪ್ಪಿಸಲು ಹೋಗಿ ಕ್ಯಾಂಟರ್ ಹೋಟೆಲ್ ಗೆ ನುಗ್ಗಿದೆ ಎನ್ನಲಾಗಿದೆ. ಹೋಟೆಲ್ ಮುಂದೆ ನಿಂತಿದ್ದ ಐದು ಕಾರುಗಳು ಜಖಂ ಆಗಿವೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ಯಾಂಟರ್ ಅನ್ನು ವಶಕ್ಕೆ ಪಡೆದು ಚಾಲಕ ಅಜೀತ್ ಎಂಬಾತನನ್ನು ಬಂಧಿಸಲಾಗಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಎಸ್ಪಿ ಡಿ.ಎಲ್.ನಾಗೇಶ್ ತಿಳಿಸಿದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *