ಬೆಂಗಳೂರು : ಕೆಂಪೆಗೌಡ ಪ್ರತಿಮೆ ಉದ್ಘಾಟಿಸಲಿರುವ ಮೋದಿ.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಣದ ಸಮೀಪ ಸ್ಥಾಪನೆ ಮಾಡಲಾಗಿರುವ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ಥೀಮ್ ಪಾಕ್೯ ಅನ್ನು ಪ್ರಧಾನಿ ನರೇಂದ್ರ ಮೋದಿಯವರು. ನವೆಂಬರ್ 10ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸ್ಥಾಪನೆ ಮಾಡಲಾಗಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಪ್ರಧಾನಿ ಅವರ ಮೂಲಕ ಉದ್ಘಾಟನೆ ಮಾಡಿಸಲು ಸಕಾ೯ರ ನಿಧ೯ರಿಸಿದೆ.
ನ.10 ರಂದು ಈ ಕಾಯ೯ಕ್ಕಾಗಿ ಪ್ರಧಾನಿಗಳು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಸೂಕ್ತ ವ್ಯವಸ್ಥೆಯನ್ನ ಮಾಡಲಾಗುವುದು ಎಂದಿದ್ದಾರೆ.
ವರದಿ : ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.


