ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ
ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ. ನೌಕೆ ಆಗಸ್ಟ್ 23 ಅಥವಾ 24ರಂದು ಚಂದ್ರನ ಅಂಗಳಕ್ಕೆ ತಲುಪಲಿದೆ.
ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ರಿಂದ ಚಾಲನೆ
ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ಯೋಜನೆಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಚಾಲನೆ ನೀಡಿದರು.
ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆಯನ್ನು GSLV-MK3 ರಾಕೆಟ್ ಹೊತ್ತೊಯ್ದಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.
ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ವಿಶೇಷತೆಗಳನ್ನು ನೋಡುವುದಾದರೆ, ಲ್ಯಾಂಡರ್, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ. ಚಂದ್ರಯಾನ-3 ಯೋಜನೆಗೆ 630 ಕೋಟಿ ರೂ. ಆಗಿರುವ ವೆಚ್ಚ ತಗುಲಿದೆ.
ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 2.35 ಕ್ಕೆ ನಿಗದಿತ ಉಡಾವಣೆಗೆ ಸಿದ್ಧವಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಗಸ್ಟ್ ಅಂತ್ಯದ ವೇಳೆಗೆ ಚಂದ್ರಯಾನ -3 ಮಿಷನ್ ಅನ್ನು ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿಸುವ ಗುರಿಯನ್ನು ಹೊಂದಿದೆ. ಯಶಸ್ವಿ ಲ್ಯಾಂಡಿಂಗ್ ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಈ ಸಾಧನೆಯನ್ನು ಮಾಡಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಲಿದೆ.
ಇಸ್ರೋ ಪ್ರಕಾರ ಚಂದ್ರಯಾನ-3 ಅನ್ನು ಸುಮಾರು 615 ಕೋಟಿ ರೂ.ನಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ಲ್ಯಾಂಡರ್ ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ಗೆ ಸುಮಾರು 250 ಕೋಟಿ ರೂ. ವೆಚ್ಚವಾಗಲಿದೆ. ಉಡಾವಣಾಗೆ 365 ಕೋಟಿ ರೂ. ವೆಚ್ಚವಾಗಲಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಕೆ ಶಿವನ್ ಹೇಳಿದ್ದರು.
ಚಂದ್ರಯಾನ-3ಯ ಎಲ್ಲ ಕಾರ್ಯತಂತ್ರಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಭಾರತವು ಚಂದ್ರನಲ್ಲಿ ತನ್ನ ಮಿಷನ್ನ್ನು ಸುರಕ್ಷಿತ ಲ್ಯಾಂಡಿಂಗ್ ಮಾಡುವ ನಾಲ್ಕನೇ ರಾಷ್ಟ್ರವಾಗಲಿದೆ. ಬಾಹ್ಯಾಕಾಶ ಸಂಶೋಧನೆಯ ಕ್ಷೇತ್ರದಲ್ಲಿ ಭಾರತ ತನ್ನ ತಾಂತ್ರಿಕ ಸಾಮರ್ಥ್ಯವನ್ನು ಈ ಮೂಲಕ ಪ್ರದರ್ಶಿಸುತ್ತಿದೆ.
ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆ ಇಂದು (ಜು.14) ಉಡಾವಣೆಯಾಗಿದೆ. ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ನಭಕ್ಕೆ ಯಶಸ್ವಿಯಾಗಿ ಹಾರಿದೆ. ಚಂದ್ರಯಾನ-3 ನೌಕೆ GSLV-MK3 ರಾಕೆಟ್ ಹೊತ್ತೊಯ್ದಿದೆ. ಚಂದ್ರಯಾನ-3 ನೌಕೆ ಲ್ಯಾಂಡರ್, ರೋವರ್ ಒಳಗೊಂಡಿದೆ. ಚಂದ್ರನ ನೆಲದಲ್ಲಿ ಅಧ್ಯಯನ ನಡೆಸಲು ಇಸ್ರೋ ಕಳಿಸಿರುವ 3ನೇ ನೌಕೆ ಇದಾಗಿದೆ. ನೌಕೆ ಆಗಸ್ಟ್ 23 ಅಥವಾ 24ರಂದು ಚಂದ್ರನ ಅಂಗಳಕ್ಕೆ ತಲುಪಲಿದೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.
