ಚಲೋ ಕಾರ್ಯಕ್ರಮ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ
ಮಹಿಷ ದಸರಾ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಕುರಿತು ಸುದ್ದಿಗೋಷ್ಠಿ ನಡೆಸಿ ಸಂಸದ ಪ್ರತಾಪ್ ಸಿಂಹ ಮಹಿಷ ದಸರಾಗೆ ವಿರೋಧ ವ್ಯಕ್ತ ಪಡಿಸಿದರು.
ಟಿಪ್ಪು ಹೈದರಾಲಿ ಕಾಲ ಬಿಟ್ರೆ 414 ವರ್ಷದಿಂದ ನಿರಂತರವಾಗಿ ಮೈಸೂರು ದಸರಾ ನಡೆದುಕೊಂಡಿ ಬರುತ್ತಿದೆ.ಮೈಸೂರು ಜನರಿಗೆ ದಸರಾ ಅಂದ್ರೆ ಏನು, ನವರಾತ್ರಿ ಅಂದ್ರೆ ಏನು ಅಂತ ಗೊತ್ತು. 2015-16 ರಲ್ಲಿ ಮಹಿಷ ದಸರಾ ಎನ್ನುವ ಅಸಹ್ಯ ಹುಟ್ಟುಹಾಕಿದ್ದಾರೆ.
ಆಗ ಇದ್ದವರು ಉದಾಸೀನ ತೋರಿದ್ರು.
ಚಾಮುಂಡಿ ಬೆಟ್ಟಕ್ಕೆ ಹೋಗಿ ದೆವ್ವವನ್ನ ದೇವರು ಅಂತ, ದೇವರನ್ನ ದೆವ್ವ ಅಂತ ಹೇಳುವ ಕೆಲಸ ಆಯ್ತು.
ನಂತರ ಮೆರವಣಿಗೆ ಮಾಡಲಾಯಿತು.
ಆಗಿನ ಸಿದ್ದರಾಮಯ್ಯ ಸರ್ಕಾರ ಅದನ್ನ ನಿಲ್ಲಿಸಲಿಲ್ಲ.
ಇಲ್ಲಿ ಭಕ್ತರ ಭಾವನೆಗೆ ನೋವಾಗುವ ಅಸಹ್ಯವನ್ನು ನಿಲ್ಲಿಸುವ ಮನವಿಗೆ ಸಚಿವ ಸೋಮಣ್ಣ ಸ್ಪಂದಿಸಿ ನಿಲ್ಲಿಸಲು ನಾಂದಿ ಹಾಡಿದ್ರು.
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದಲ್ಲಿ ಇಂತಹ ಅಸಹ್ಯವನ್ನು ಮಟ್ಟ ಹಾಕುವ ಕೆಲಸ ಆಗಿದೆ ಎಂದರು.
ಈಗ ಸಿದ್ದರಾಮಯ್ಯ ಸರ್ಕಾರ ಬಂದಾಗ ಅವರು ಮತ್ತೆ ಹೆಚ್ಚಿಕೊಂಡಿದ್ದಾರೆ.ಚಾಮುಂಡಿ ಬೆಟ್ಟದಲ್ಲಿ ಮಹಿಷ ಆಚರಣೆ ಮಾಡುವ ಮಾತು ಆಡುತ್ತಿದ್ದಾರೆ.
ಇದನ್ನ ತಡೆಯುವ ನಿಟ್ಟಿನಲ್ಲಿ ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟ ಚಲೋ ಜಾಥ ನಡೆಸುತ್ತೇವೆ.
ಇದರಲ್ಲಿ 5 ಸಾವಿರ ನಾಗರೀಕರು ಪಾಲ್ಗೊಳ್ಳುತ್ತಾರೆ.
ಚಾಮುಂಡಿ ಬೆಟ್ಟದ ಪಾದ ಹಾಗೂ ವಿಶ್ವವಿದ್ಯಾಲಯದ ಆವರಣದಿಂದ ಜನ ತೆರಳುತ್ತಾರೆ.
ಚಾಮುಂಡಿ ಬೆಟ್ಟಕ್ಕೆ ತೆರಳಿ, ದೇವಿಗೆ ಪೂಜೆ ಸಲ್ಲಿಸಿ ದಿನವಿಡಿ ಕಾರ್ಯಕ್ರಮ ನಡೆಸುತ್ತೇವೆ.
ಜಿಲ್ಲಾಧಿಕಾರಿ ಹಾಗು ಸಿಟಿ ಪೊಲೀಸ್ ಕಮಿಷನರ್ ಬಳಿ ತೆರಳಿ ಮಹಿಷ ದಸರಾಗೆ ಅನುಮತಿ ನೀಡದಂತೆ ಮನವಿ ಮಾಡುತ್ತೇವೆ ಎಂದರು. ಇದು ಭಾರತೀಯ ಜನತಾ ಪಕ್ಷದ ಕಾರ್ಯಕ್ರಮ ಅಲ್ಲ.
ಮತ್ತೆ ಮಹಿಷ ದಸರಾ ತಡೆಗಟ್ಟುವ ಕಾರ್ಯಕ್ರಮ.ಇದರಲ್ಲಿ ಮೈಸೂರಿನ ಎಲ್ಲಾ ಪ್ರಜ್ಞಾವಂತ ನಾಗರೀಕರು ಭಾಗಿಯಾಗಿ.ಬಹುಸಂಖ್ಯಾತರ ಭಾವನೆ ರಕ್ಷಣೆ ಮಾಡುವ ಕೆಲಸ ಮಾಡೊಣ.ಮೈಸೂರಿನ ನಾಗರೀಕರಿಗೆ ಚಲೋ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಕರೆ.ಇದು ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.ಸುದ್ದಿಗೋಷ್ಟಿಯಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ವರದಿ: ನಂದಿನಿ ಮೈಸೂರು


