ಎದೆ ಸೀಳಿದರೆ ನಾಲ್ಕಕ್ಷರ ಇಲ್ಲ ಎಂದವರ ತಲೆ ಸೀಳಿದರೆ ನಯಾಪೈಸೆ ಬುದ್ದಿ ಇಲ್ಲದಾಗಿದೆ : ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಎದೆ ಸೀಳಿದರೆ ನಾಲ್ಕಕ್ಷರ ಇಲ್ಲ ಎಂದವರ ತಲೆ ಸೀಳಿದರೆ ನಯಾಪೈಸೆ ಬುದ್ದಿ ಇಲ್ಲದಾಗಿದೆ : ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ತೇಜಸ್ವಿ ಸೂರ್ಯನಿಗೆ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವಂತಹ ತುರ್ತು ಏನಿತ್ತು? ಎದೆ ಸೀಳಿದರೆ ನಾಲ್ಕಕ್ಷರ ಇಲ್ಲ ಎಂದವರ ತಲೆ ಸೀಳಿದರೆ ನಯಾಪೈಸೆ ಬುದ್ದಿ ಇಲ್ಲದಾಗಿದೆ! ಅನಾಹುತ ಸಂಭವಿಸಿದ್ದರೆ ಬಲಿಯಾಗುವ ಜೀವಗಳಿಗೆ ಹೊಣೆ ಯಾರಾಗುತ್ತಿದ್ದರು? ತೇಜಸ್ವಿ ಸೂರ್ಯ ಎಲ್ಲಾ ಕಡೆಯೂ ತನ್ನ ಮಕ್ಕಳಾಟ ಆಡಲು ಹೋಗುವುದೇಕೆ? ಎಂದು ಕಾಂಗ್ರೆಸ್ ಟೀಕಿಸಿದೆ.
ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆದದ್ದು ಶಿಕ್ಷಾರ್ಹ ಅಪರಾಧ, ವಿಮಾನಯಾನ ಸಂಸ್ಥೆ ಈ ಪ್ರಕರಣ ಮುಚ್ಚು ಹಾಕಲು ಯತ್ನಿಸಿದ್ದೇಕೆ? ಬಿಜೆಪಿಗೊಂದು ಕಾನೂನು, ಇತರರಿಗೊಂದು ಕಾನೂನು ಇದೆಯೇ ಬಿಜೆಪಿ ಸರ್ಕಾರ ? ಎದೆ ಸೀಳಿದರೆ ನಾಲ್ಕಕ್ಷರ ಬರುವುದಿಲ್ಲ ಎನ್ನುವ ತೇಜಸ್ವಿ ಸೂರ್ಯ ಅವರಲ್ಲಿ ಈಗ ಬಾಯಿ ತೆರೆದರೆ ನಾಲ್ಕು ಮಾತೇ ಹೊರಡುತ್ತಿಲ್ಲವೇಕೆ? ಎಂದು ಕಾಂಗ್ರೆಸ್ ಟೀಕಿಸಿದೆ.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *