ನಾವು ಯಾವುದೇ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ; ಅಮಿತ್ ಶಾಗೆ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ನಾವು ಯಾವುದೇ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ; ಅಮಿತ್ ಶಾಗೆ ಡಿ.ಕೆ. ಶಿವಕುಮಾರ್ ತಿರುಗೇಟು.

‘ಬಿಜೆಪಿ ಪಕ್ಷದಂತೆ ಕಾಂಗ್ರೆಸ್ ಯಾವುದೇ ಲಿಂಗಾಯತ ನಾಯಕ ಹಾಗೂ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳು, ಕಾಂಗ್ರೆಸ್ ಪಕ್ಷ ಲಿಂಗಾಯತ ಮುಖ್ಯಮಂತ್ರಿಗಳಿಗೆ ತಮ್ಮ ಅವಧಿ ಪೂರ್ಣಗೊಳಿಸಲು ಅವಕಾಶ ನೀಡಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ ಅದಕ್ಕೆ ಉತ್ತರಿಸಿದ ಶಿವಕುಮಾರ್ ಅವರು, ‘ಅಮಿತ್ ಶಾ ಅವರಿಗೆ ರಾಜ್ಯ ರಾಜಕೀಯ ಇತಿಹಾಸದ ಬಗ್ಗೆ ಗೊತ್ತಿಲ್ಲ. ನಾನು ವಿರೇಂದ್ರ ಪಾಟೀಲ್ ಅವರ ಸರ್ಕಾರದ ಭಾಗವಾಗಿದ್ದೆ. ನಾವು ಬಿಜೆಪಿಯವರಂತೆ ಯಾವುದೇ ಮುಖ್ಯಮಂತ್ರಿಯಿಂದ ಕಣ್ಣೀರು ಹಾಕಿಸಿಲ್ಲ. ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗೆ ಇಳಿಯುವಾಗ ಯಾವ ಮಾತು ಆಡಿದ್ದಾರೆ. ಅದಕ್ಕೆ ಕಾರಣವೇನು? ಅವರಿಗೆ ಯಾವ ರೀತಿ ಬೆದರಿಕೆ ಹಾಕಲಾಗಿತ್ತು ಎಂಬ ವಿಷಯ ನನಗೆ ಗೊತ್ತಿದೆ. ಈಗ ಆ ವಿಚಾರವಾಗಿ ಮಾತನಾಡುವುದಿಲ್ಲ. ಬಿಜೆಪಿಗೆ ಯಡಿಯೂರಪ್ಪ ಅವರ ಕಣ್ಣೀರಿನ ಶಾಸ್ತಿ ಆಗಲಿದೆ. ಜಗದೀಶ್ ಶೆಟ್ಟರ್ ಹಾಗೂ ಸವದಿ ಅವರು ಕಣ್ಣೀರು ಹಾಕದಿರಬಹುದು. ಅವರ ಮನಸ್ಸು ಅತ್ತಿದೆ’ ಎಂದು ತಿಳಿಸಿದರು.

ಉಳಿದಂತೆ ಶಿವಕುಮಾರ್ ಅವರು ಹೇಳಿದ್ದಿಷ್ಟು:

‘ಕಳೆದ ಮೂರು ದಿನಗಳ ಕಾಲ ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಸ ಮಾಡಿದ್ದು, ಪಕ್ಷದ ಪರವಾಗಿ ಪ್ರಚಾರದ ಜತೆಗೆ ದೇವರ ಸನ್ನಿಧಿಗೂ ಭೇಟಿ ನೀಡಿದ್ದೇನೆ. ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲ, ಹಳ್ಳಿಗಳಲ್ಲೂ ಸಾವಿರಾರು ಜನ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಸಾವಿರಾರು ಮಂದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಚಿಕ್ಕಮಗಳೂರು ನಗರ ಸೇರಿದಂತೆ ಆ ಜಿಲ್ಲೆಯ ಐದಕ್ಕೆ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸೂಚನೆಗಳು ದಟ್ಟವಾಗಿವೆ. ಉಡುಪಿ ಮಂಗಳೂರು ಜಿಲ್ಲೆಯಗಳಲ್ಲಿ ಕನಿಷ್ಠ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಾತಾವರಣವಿದೆ. ಸಮೀಕ್ಷೆಗಳ ವರದಿಗಳು ಗ್ಯಾರಂಟಿ ಆಗಲಿವೆ ಎಂಬ ನಂಬಿಕೆ ಇದೆ. ಇಂದು ಅಮಿತ್ ಶಾ ಅವರು ಮೀಸಲಾತಿ ವಿಚಾರವಾಗಿ ಮಾತನಾಡಿದ್ದು, ನೀವು ಮುಸಲ್ಮಾನರಿಗೆ ಹೇಗೆ ಮೀಸಲಾತಿ ನೀಡುತ್ತೀರಿ ಎಂದು ಕೇಳಿದ್ದಾರೆ. ನಮ್ಮ ರಾಜ್ಯದಲ್ಲಿ ಒಕ್ಕಲಿಗರಾಗಲಿ, ಲಿಂಗಾಯತರಾಗಲಿ, ಬೇರೆಯವರ ಮೀಸಲಾತಿ ಕಿತ್ತು ನಮಗೆ ಶೇ.2ರಷ್ಟು ಮೀಸಲಾತಿ ನೀಡಿ ಎಂದು ಕೇಳಿರಲಿಲ್ಲ. ಕಾಂಗ್ರೆಸ್ ಪಕ್ಷದ ಬದ್ಧತೆ ಎಂದರೆ, ಮೀಸಲಾತಿ ಮಿತಿಯನ್ನು ವಿಸ್ತರಿಸಿ ಈ ಸಮುದಾಯಗಳಿಗೆ ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿ ನೀಡಬೇಕು ಎಂಬುದು ನಮ್ಮ ಒತ್ತಾಸೆ. ಮುಸಲ್ಮಾನರಿಗೂ ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಸಿಗಬೇಕಾದ ಮೀಸಲಾತಿ ಸಿಗಬೇಕು. ಬೇರೆ ರಾಜ್ಯಗಳಲ್ಲೂ ಮೀಸಲಾತಿ ಮಿತಿಯನ್ನು ಮೀರಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ನ್ಯಾಯಾಲಯದಲ್ಲಿ ಮೀಸಲಾತಿ ವಿಚಾರವಾಗಿ ಸರ್ಕಾರದ ಆದೇಶ ಜಾರಿ ಕಷ್ಟ ಎಂಬುದು ಅಭಿಪ್ರಾಯ ವ್ಯಕ್ತವಾಗಿದೆ. ಇನ್ನು ರಾಜ್ಯ ಹಾಗೂ ಹೊರ ದೇಶಗಳಲ್ಲಿರುವ ಮತದಾರರಿಗೆ ನಾನು ಈ ಮೂಲಕ ಮನವಿ ಮಾಡಿಕೊಳ್ಳಲು ಬಯಸುತ್ತೇನೆ. ನೀವು ದೂರದ ಊರಿನಲ್ಲಿದ್ದರೂ ನಿಮ್ಮ ಸೇವೆಯಿಂದ ನಮ್ಮ ರಾಜ್ಯಕ್ಕೆ ಹೆಸರು ಬಂದಿದೆ. ರಾಜ್ಯಕ್ಕೆ ಬಂಡವಾಳ ಹೂಡಿಕೆ ಬರುತ್ತಿಲ್ಲ, ನಿರುದ್ಯೋಗ ಹೆಚ್ಚಾಗಿದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ನೀವೆಲ್ಲರೂ ಭಾಗಿಯಾಗಿ ಮತದಾನ ಮಾಡಬೇಕು ಎಂದು ಮನವಿ ಮಾಡುತ್ತೇನೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಿಂದ ಹೊರಗೆ ಇರುವವರಿಗಾಗಿ ನೆರವಾಗಲು, ಸಮಸ್ಯೆ ಬಗೆಹರಿಸಲು ಪ್ರತ್ಯೇಕ ಸಚಿವಾಲಯ ಆರಂಭಿಸಲಾಗುವುದು. ಇದನ್ನು ನಮ್ಮ ಪ್ರಣಾಳಿಕೆಯಲ್ಲಿ ಸೇರಿಸುತ್ತೇವೆ.

ರಾಜ್ಯಕ್ಕೆ ಅಂಟಿರುವ ಭ್ರಷ್ಟಾಚಾರದ ಕಳಂಕವನ್ನು ತೊಡೆದು ಹಾಕಿ ಉತ್ತಮ ಆಡಳಿತ ನೀಡುವ ಗುರಿ ಕಾಂಗ್ರೆಸ್ ಪಕ್ಷದ್ದಾಗಿದೆ.’

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

ಪ್ರಶ್ನೋತ್ತರ

ಪಂಚಮಸಾಲಿ ಸಮುದಾಯಕ್ಕೆ ಅವರ ಆಗ್ರಹ ಮಾಡಿದಷ್ಟು ಮೀಸಲಾತಿ ನೀಡುತ್ತೀರಾ ಎಂದು ಕೇಳಿದಾಗ, ‘ನಾವು ಕೇವಲ ಒಂದು ಸಮುದಾಯದ ಬಗ್ಗೆ ಮಾತ್ರವಲ್ಲ, ಎಲ್ಲಾ ಸಮುದಾಯದವರನ್ನು ಕರೆದು ಅವರ ಅಭಿಪ್ರಾಯ ಸಂಗ್ರಹಿಸಿ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುತ್ತೇವೆ. ಬೇರೆ ಸಮುದಾಯಗಳಿಗೆ ಯಾವುದೇ ರೀತಿ ಅನ್ಯಾಯ ತೊಂದರೆ ಆಗದಂತೆ ಮೀಸಲಾತಿ ನೀಡುತ್ತೇವೆ’ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರ ಲಿಂಗಾಯತ ಸಮುದಾಯದ ವಿವಾದ ಕುರಿತು ಕೇಳಿದಾಗ, ‘ಸಿದ್ದರಾಮಯ್ಯ ಅವರು ಪ್ಬುದ್ಧರು. ಅವರಿಗೆ ಸಾಮಾನ್ಯ ಪ್ರಜ್ಞೆ ಇದೆ. ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅವರು ಸಮುದಾಯದ ಬಗ್ಗೆ ಮಾತನಾಡಿಲ್ಲ. ಸರ್ಕಾರದ ವಿಚಾರವಾಗಿ ಮಾತನಾಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯಲ್ಲಿ ಲಿಂಗಾಯತ ಮುಖ್ಯಮಂತ್ರಿ ವಿಚಾರ ಘೋಷಿಸಿದ್ದು, ಜೋಷಿ ಅವರು ನಾವು ಆ ಘೋಷಣೆ ಮಾಡಿಲ್ಲ ಎಂದಿದ್ದಾರೆ ಎಂಬುದರ ಬಗ್ಗೆ ಕೇಳಿದಾಗ, ‘ಅದು ಬಿಜೆಪಿ ಪಕ್ಷದ ದ್ವಂದ್ವ ನೀತಿ. ನಮ್ಮದು ಒಂದೇ ನೀತಿ ಅದು ಸಾಮೂಹಿಕ ನಾಯಕತ್ವದ ನೀತಿ. ಇದೇ ನಮ್ಮ ಬದ್ಧತೆ’ ಎಂದು ತಿಳಿಸಿದರು. ಚುನಾವಣಾ ಆಯೋಗದ ಅಧಿಕಾರಿಗಳು ಶಿವಕುಮಾರ್ ಅವರ ಹಿಂದೆ ಬಿದ್ದಿದ್ದಾರಾ ಎಂಬ ಪ್ರಶ್ನೆಗೆ, ‘ರಾಜಕೀಯದಲ್ಲಿ ಇದೆಲ್ಲ ಸಹಜ. ಎಲ್ಲರನ್ನು ನಿಭಾಯಿಸಿಕೊಂಡು ಹೋಗಬೇಕು’ ಎಂದರು. ಪ್ರಿಯಾಂಕಾ ಗಾಂಧಿ ಅವರ ರಾಜ್ಯ ಪ್ರವಾಸದ ಬಗ್ಗೆ ಕೇಳಿದಾಗ, ‘ನಾಳೆ ಪ್ರಿಯಾಂಕಾ ಗಾಂಧಿ ಅವರು ಮೈಸೂರು, ಹನೂರು, ಕೊಳ್ಳೆಗಾಲ, ಶೃಂಗೇರಿಯಲ್ಲಿ ಪ್ರವಾಸ ಮಾಡಲಿದ್ದಾರೆ’ ಎಂದು ತಿಳಿಸಿದರು.

ಲಿಂಗಾಯತ ಸಮುದಾಯ ಬಿಜೆಪಿ ಜತೆಗಿದ್ದು, ಶೆಟ್ಟರ್ ಅವರಿಂದ ಕಾಂಗ್ರೆಸ್ ಗೆ ಲಾಭವಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ಲಿಂಗಾಯತರು ಕೇವಲ ಬಿಜೆಪಿ ಜತೆಗಿಲ್ಲ, ಕಾಂಗ್ರೆಸ್ ಜತೆಗೂ ಇದ್ದಾರೆ. ಇದುವರೆಗೂ ಹೆಚ್ಚಿನ ಜನ ಬಿಜೆಪಿ ಜತೆ ಗುರುತಿಸಿಕೊಂಡಿದ್ದರು. ಈಗ ಕಾಲ ಬದಲಾಗಿದೆ. ಲಿಂಗಾಯತ ಸಮುದಾಯದವರು ಈಗ ಕಾಂಗ್ರೆಸ್ ಪಕ್ಷ ಬಸವಣ್ಣನವರ ತತ್ವ ಸಿದ್ಧಾಂತ ಪಾಲಿಸಲಿದೆ. ಕಾಂಗ್ರೆಸ್ ಜಾತ್ಯಾತೀತವಾಗಿ ಕೆಲಸ ಮಾಡಲಿದೆ, ತಮ್ಮ ಸಮುದಾಯವನ್ನು ಕಾಂಗ್ರೆಸ್ ಪ್ರತಿನಿಧಿಸಲಿದೆ ಎಂದು ಅರ್ಥ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿದೆ’ ಎಂದು ತಿಳಿಸಿದರು. ಬಿಜೆಪಿ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯನ್ನು ಹೊಂದಲು ಸಿದ್ಧವಿದೆ ಕಾಂಗ್ರೆಸ್ ಲಿಂಗಾಯತ ಸಿಎಂ ಮಾಡುವುದೇ ಎಂದು ಕೇಳಿದಾಗ, ‘ನಾವು ಕಾಂಗ್ರೆಸ್ ಪಕ್ಷ ನಡೆಸುತ್ತಿದ್ದು, ಬಿಜೆಪಿ ಪಕ್ಷ ನಡೆಸುತ್ತಿಲ್ಲ. ಬೇರೆ ಪಕ್ಷದವರು ಕಾಂಗ್ರೆಸ್ ಏನು ಮಾಡಬೇಕು ಎಂದು ಹೇಳುವ ಅಗತ್ಯವಿಲ್ಲ. ರಾಜ್ಯದ ಜನರ ಹಿತಾಸಕ್ತಿ, ಪಕ್ಷದ ಅಭಿಪ್ರಾಯದಂತೆ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ’ ಎಂದು ತಿಳಿಸಿದರು.

ಪಕ್ಷ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ್ದು:

ಇಂದು ದೊಡ್ಡಬಳ್ಳಾಪುರದ 8 ಹಾಲಿ ನಗರಸಭಾ ಸದಸ್ಯರು ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ನೀವು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಾ ದೇಶದ ತ್ರಿವರ್ಣ ಧ್ವಜವನ್ನು ನಿಮ್ಮ ಮೇಲೆ ಹಾಕಿಕೊಳ್ಳುವ ಪವಿತ್ರವಾದ ಅವಕಾಶ ಸಿಕ್ಕಿದೆ. ಜಗದೀಶ್ ಶೆಟ್ಟರ್, ಸವದಿ, ಪುಟ್ಟಣ್ಣ ಸೇರಿದಂತೆ ಪ್ರಮುಖ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ನಿನ್ನೆ ಬೈಂದೂರಿನಲ್ಲಿ ಒಂದೂವರೆ ಸಾವಿರ ಜನ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದರು. ಇಂದು ನಿಮ್ಮನ್ನು ಬಹಳ ತುಂಬುಹೃದಯದಿಂದ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇನೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *